ಡೈಲಿ ವಾರ್ತೆ: 14/Mar/2024

ವಾಹನ ಸವಾರರಿಗೆ ಗುಡ್ ನ್ಯೂಸ್ : ಪೆಟ್ರೋಲ್-ಡೀಸೆಲ್ ದರ ಪ್ರತಿ ಲೀಟರ್ಗೆ 2 ರೂಪಾಯಿ ಇಳಿಕೆ

ನವದೆಹಲಿ: ಲೋಕಸಭಾ ಚುನಾವಣೆ ಹೊಸ್ತಿಲಲ್ಲೇ ಪೆಟ್ರೋಲ್, ಡೀಸೆಲ್ (Petrol and Diesel) ದರ ಇಳಿಕೆಯಾಗಿದೆ. ಪೆಟ್ರೋಲ್, ಡೀಸೆಲ್ ದರ ಪ್ರತಿ ಲೀಟರ್ಗೆ 2 ರೂಪಾಯಿ ಇಳಿಕೆಯಾಗಿದ್ದು, ಪರಿಷ್ಕೃತ ದರ ನಾಳೆ ಅಂದರೆ ಮಾರ್ಚ್ 15ರ ಬೆಳಗ್ಗೆ 6ರಿಂದ ಜಾರಿಗೆ ಬರಲಿದೆ ಎಂದು ವರದಿಯಾಗಿದೆ. ಮಹಿಳಾ ದಿನಾಚರಣೆಯಂದು ಪ್ರಧಾನಿ ಮೋದಿ ಎಲ್‌ಪಿಜಿ ಸಿಲಿಂಡರ್ ಬೆಲೆ 100 ರೂಪಾಯಿ ಕಡಿತ ಮಾಡಿದ್ದರು. ಇದೀಗ ಪೆಟ್ರೋಲ್ ಡೀಸೆಲ್ ಬೆಲೆ ಕಡಿತಗೊಳಿಸಲಾಗಿದೆ. ಇದರೊಂದಿಗೆ ಲೋಕಸಭಾ ಚುನಾವಣಾ ದಿನಾಂಕ ಘೋಷಣೆಗೂ ಮೊದಲೇ ಕೇಂದ್ರ ಸರ್ಕಾರ ಬಂಪರ್ ಕೊಡುಗೆ ನೀಡಿದೆ.

ಬೆಂಗಳೂರಿನಲ್ಲಿ ಇಂದು (ಮಾರ್ಚ್ 14) ಪ್ರತಿ ಲೀಟರ್ ಪೆಟ್ರೋಲ್ ದರ 101.94 ರೂಪಾಯಿ ಹಾಗೂ ಡೀಸೆಲ್ ಬೆಲೆ 87.89 ರೂಪಾಯಿ ಇದ್ದು. ನಾಳೆ(ಮಾರ್ಚ್ 15) ಬೆಳಗ್ಗೆಯಿಂದ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ 2 ರೂಪಾಯಿ ಇಳಿಕೆಯಾಗಲಿದೆ. ಪೆಟ್ರೋಲ್ ಬೆಲೆ 99.94 ರೂಪಾಯಿ ಹಾಗೂ ಡೀಸೆಲ್ ಬೆಲೆ 85.89 ರೂಪಾಯಿಗೆ ಇಳಿಕೆ ಆಗಲಿದೆ.