



ಡೈಲಿ ವಾರ್ತೆ: 16/Mar/2024




ಆನಗಳ್ಳಿ ಗ್ರಾ. ಪಂ. ಮಾಜಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ಗಂಗಾಧರ ಶೆಟ್ಟಿ ನಿಧನ
ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಆನಗಳ್ಳಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು, ಆನಗಳ್ಳಿ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಉಡುಪಿ ಜಿಲ್ಲಾ ಕೆಡಿಪಿ ಸದಸ್ಯರಾದ ಗಂಗಾಧರ ಶೆಟ್ಟಿಯವರು ಶುಕ್ರವಾರ ರಾತ್ರಿ ನಿಧನರಾಗಿರುತ್ತಾರೆ.
ಇಂದು (ಶನಿವಾರ) ಬೆಳಿಗ್ಗೆ ಅವರ ಹೇರಿಕುದ್ರು ಸ್ವಗೃಹದಲ್ಲಿ ಅಂತ್ಯಕ್ರಿಯೆ ನೆಡೆಯಲಿದೆ.
ಗಂಗಾಧರ ಶೆಟ್ಟಿಯವರ ಅಗಲಿಕೆಗೆ ಗಣ್ಯರು ಹಾಗೂ ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಾನ್ಮಕ್ಕಿ ಹರಿಪ್ರಸಾದ್ ಶೆಟ್ಟಿ ಸಂತಾಪ ಸೂಚಿಸಿದ್ದಾರೆ.

