ಡೈಲಿ ವಾರ್ತೆ: 16/Mar/2024

ಲೋಕಸಭಾ ಚುನಾವಣೆ 2024: ಕರ್ನಾಟಕದಲ್ಲಿ ಏ.26, ಮೇ 7ಕ್ಕೆ ಮತದಾನ

ನವದೆಹಲಿ: ದೇಶವೇ ಕುತೂಹಲದಿಂದ ಕಾಯುತ್ತಿದ್ದ ಲೋಕಸಭಾ ಚುನಾವಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕರ್ನಾಟಕದಲ್ಲಿ ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ.

ಏ.26 ಕ್ಕೆ ಮೊದಲ ಹಾಗೂ ಮೇ 7 ಕ್ಕೆ ಎರಡನೇ ಹಂತದ ಮತದಾನ ನಡೆಯಲಿದೆ. ಜೂನ್ 4ಕ್ಕೆ ಮತ ಎಣಿಕೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ದೇಶಾದ್ಯಂತ ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಲಿದೆ. ಉಲ್ಲಂಘಿಸಿದವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್‌ ಕುಮಾರ್‌ ತಿಳಿಸಿದರು.