ಡೈಲಿ ವಾರ್ತೆ: 19/Mar/2024

ರಾಜೀವ್ ಗಾಂಧಿ ಜ್ಯೋತಿ ಯಾತ್ರಾ ಕಮಿಟಿಯ ರಾಜ್ಯ ಕಾರ್ಯದರ್ಶಿಯಾಗಿ ಹನೀಫ್ ಬಗ್ಗುಮೂಲೆ ಆಯ್ಕೆ.

ಬಂಟ್ವಾಳ : ರಾಜೀವ್ ಗಾಂಧಿ ಜ್ಯೋತಿ ಯಾತ್ರಾ ಕಮಿಟಿ ಇದರ ರಾಜ್ಯ ಕಾರ್ಯದರ್ಶಿಯಾಗಿ ಹನೀಫ್ ಬಗ್ಗುಮೂಲೆ ಆಯ್ಕೆಯಾಗಿದ್ದಾರೆ.

ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹಾಗೂ ಕೆಪಿಸಿಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿ ಅವರು ಶಿಫಾರಸ್ಸಿನಂತೆ ರಾಜೀವ್ ಗಾಂಧಿ ಜ್ಯೋತಿ ಯಾತ್ರಾ ಕಮಿಟಿ ಇದರ ರಾಜ್ಯ ಚೆಯರ್ಮೇನ್ ಆರ್. ದೊರೈ ಅವರು ಹನೀಫ್ ಬಗ್ಗುಮೂಲೆ ಅವರನ್ನು ನೇಮಕಗೊಳಿಸಿ ಮಾರ್ಚ್ 15 ರಂದು ಆದೇಶ ಹೊರಡಿಸಿದ್ದಾರೆ.

ಹನೀಫ್ ಬಗ್ಗುಮೂಲೆ ಅವರು ಕೆಪಿಸಿಸಿ ಕಾರ್ಮಿಕ ವಿಭಾಗದ ಕಾರ್ಯದರ್ಶಿಯಾಗಿ, ದ.ಕ.ಜಿಲ್ಲಾ ಕಾಂಗ್ರೆಸ್ ಸೇವಾದಳದ ಕಾರ್ಯದರ್ಶಿಯಾಗಿ, ವಿಟ್ಲ ಬ್ಲಾಕ್ ಕಾಂಗ್ರೆಸ್ ಸೇವಾದಳದ ಅಧ್ಯಕ್ಷರಾಗಿ, ದ.ಕ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಕಾರ್ಯದರ್ಶಿಯಾಗಿ, ಕಬಕ ಹಿರಿಯ ಪ್ರಾಥಮಿಕ ಶಾಲೆಯ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾಗಿ, ಹಿರಿಯ ವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷರಾಗಿ, ಎಸ್.ಎಂ.ಎ.ಉಪಾದ್ಯಕ್ಷರಾಗಿ, ಅಳಕೆಮಜಲು ಮುಹಿಯುದ್ದೀನ್ ಜುಮಾ ಮಸೀದಿ ಪ್ರಧಾನ ಕಾರ್ಯದರ್ಶಿಯಾಗಿ, ಇ.ಎಸ್.ಆರ್. ಆಂಗ್ಲ ಮಾಧ್ಯಮ ಶಾಲೆ ಪುತ್ತೂರು ಇದರ ಕಾನೂನು ಸಲಹೆಗಾರರಾಗಿ, ಬಗ್ಗುಮೂಲೆ ಎಜ್ಯುಕೇಶನ್ ಆಂಡ್ ಚಾರಿಟೇಬಲ್ ಟ್ರಸ್ಟ್ ಇದರ ಆಡಳಿತ ನಿರ್ದೇಶಕರಾಗಿ ಸೇವೆ ಸಲ್ಲಿಸಿರುವ ಅನುಭವವನ್ನು ಹೊಂದಿದ್ದು ವಿವಿಧ ಸಾಂಸ್ಕೃತಿಕ, ಧಾರ್ಮಿಕ, ಸಾಮಾಜಿಕ ಶೈಕ್ಷಣಿಕ ಕ್ಷೇತ್ರದಲ್ಲೂ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.