ಡೈಲಿ ವಾರ್ತೆ: 19/Mar/2024

ಉಡುಪಿ: ನೇತ್ರಜ್ಯೋತಿ ಪ್ಯಾರಾಮೆಡಿಕಲ್ ಕಾಲೇಜು ವಿಡಿಯೋ ಚಿತ್ರೀಕರಣ ಪ್ರಕರಣ: ಚಾರ್ಜ್ ಶೀಟ್ ಸಲ್ಲಿಕೆ

ಉಡುಪಿ: ಉಡುಪಿಯ ನೇತ್ರಜ್ಯೋತಿ ಪ್ಯಾರಾಮೆಡಿಕಲ್ ಕಾಲೇಜು ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿ ಚಾರ್ಜ್‌ಶೀಟ್ನ್ನು ಸಿಓಡಿ ಪೊಲೀಸರು ಇಂದು ಉಡುಪಿಯ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.

ಸಿಓಡಿ ಡಿವೈಎಸ್ಪಿ ಅಂಜು ಮಾಲಾ ನಾಯಕ್ ಇಂದು ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯ ನ್ಯಾಯಾಧೀಶೆ ದೀಪಾ ಅವರಿಗೆ ಸಲ್ಲಿಕೆ ಮಾಡಿದರು. ಈ ಸಂದರ್ಭದಲ್ಲಿ ಹಿರಿಯ ಸಹಾಯಕ ಪಬ್ಲಿಕ್ ಪ್ರಾಸಿಕ್ಯುಟರ್ ಎಚ್.ಎಂ.ನದಾಫ್ ಹಾಜರಿದ್ದರು.

2023ರ ಜು.18ರಂದು ಕಾಲೇಜಿನ ಮೂವರು ವಿದ್ಯಾರ್ಥಿನಿಯರು ಶೌಚಾಲಯಕ್ಕೆ ಹೋದ ಅದೇ ವರ್ಷದ ವಿದ್ಯಾರ್ಥಿನಿಯೊಬ್ಬಳ ವಿಡಿಯೋ ಚಿತ್ರೀಕರಣ ಮಾಡಲಾಗಿತ್ತು ಎಂದು ಆರೋಪಿಸಲಾಗಿತ್ತು. ಈ ಪ್ರಕರಣ ರಾಜ್ಯಾದ್ಯಂತ ಸಾಕಷ್ಟು ಚರ್ಚೆಗೆ ಕಾರಣವಾಗಿ ವಿವಾದ ಸೃಷ್ಠಿಸಿತ್ತು. ಈ ಕುರಿತು ಮಲ್ಪೆ ಪೊಲೀಸರು ವಾರದ ಬಳಿಕ ಸ್ವಯಂ ಪ್ರೇರಿತರಾಗಿ ಮೂವರು ವಿದ್ಯಾರ್ಥಿನಿಯರು ಹಾಗೂ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೆತ್ತಿ ಕೊಂಡಿದ್ದರು. ಆ.7ರಂದು ರಾಜ್ಯ ಸರಕಾರ ಈ ಪ್ರಕರಣದ ತನಿಖೆಯನ್ನು ಸಿಐಡಿಗೆ ಒಪ್ಪಿಸಿ ಆದೇಶ ನೀಡಿತು.