ಡೈಲಿ ವಾರ್ತೆ: 20/Mar/2024

ಬಿ.ಸಿ.ರೋಡ್ : ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದ 2 ನೇ ತರಗತಿ ವಿದ್ಯಾರ್ಥಿನಿ ನಿಧನ

ಬಂಟ್ವಾಳ : ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಂಟ್ವಾಳ ತೌಹೀದ್ ಶಾಲಾ 2 ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೇ ಬುಧವಾರ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್, ತಲಪಾಡಿಯ ಸಫೀರ್ ಅಹ್ಮದ್ ಎಂಬವರ ಮಗಳು ಆಯಿಷಾ ಶೈಮಾ (7) ಮೃತಪಟ್ಟ ವಿದ್ಯಾರ್ಥಿನಿ.

ಆಯಿಷಾ ಶಹಿಮಾ ಅವರು‌ ಮೂರು ವಾರಗಳ ಹಿಂದೆ ಮನೆಯಲ್ಲಿ ಕುಸಿದು ಬಿದ್ದಿದ್ದರು. ತಕ್ಷಣ ಇವರನ್ನು ಮಂಗಳೂರಿನ‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಎರಡು ಮೂರು ದಿನ ಕೋಮಾವಸ್ಥೆಯಲ್ಲಿದ್ದರು. ನಂತರ ಹೆಚ್ಚಿನ ಚಿಕಿತ್ಸೆ ನೀಡಿದ್ದಾದ್ದರೂ ಸ್ವಲ್ಪ ಮಟ್ಟಿಗೆ ಸ್ಪಂದಿಸುತ್ತಿದ್ದರು ಎಂದು ಹೇಳಲಾಗಿತ್ತು. ಆದರೆ ಬುಧವಾರ (ಇಂದು) ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯಿಸಿರೆಳೆದಿದ್ದಾರೆ.

ಶಹಿಮಾರ ಅಕಾಲಿಕ ನಿಧನಕ್ಕೆ ಬಂಟ್ವಾಳ ತೌಹೀದ್ ವಿದ್ಯಾಸಂಸ್ಥೆಯ ಆಡಳಿತ ಮತ್ತು ಸಿಬ್ಬಂದಿ ವರ್ಗ ಹಾಗೂ ತಲಪಾಡಿ ಜಮಾಅತ್ ಕಮಿಟಿ ತೀವ್ರ ಸಂತಾಪ ಸೂಚಿಸಿದೆ.