ಡೈಲಿ ವಾರ್ತೆ: 23/Mar/2024

ಸೊರಬ: ಎರಡು ಬೈಕ್ ಗಳ ನಡುವೆ ಭೀಕರ ಅಪಘಾತ: ಓರ್ವ ಸವಾರ ಮೃತ್ಯು!

ಶಿವಮೊಗ್ಗ: ಎರಡು ಬೈಕ್ ಗಳ ನಡುವೆ ನಡೆದ ಭೀಕರ ಅಪಘಾತದಲ್ಲಿ ಓರ್ವ ಸವಾರ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಉಳವಿ ಗ್ರಾಮದ ಪೆಟ್ರೋಲ್ ಬಂಕ್ ಬಳಿ ನಡೆದಿದೆ.

ಮೃತಪಟ್ಟ ಬೈಕ್ ಸವಾರ ಸೊರಬ ತಾಲೂಕಿನ ಕಣ್ಣೂರು ಗ್ರಾಮದ ನಿವಾಸಿ ಶಿವಪ್ಪ (45) ಎಂದು ಗುರುತಿಸಲಾಗಿದೆ.

ಸೊರಬ-ಸಾಗರ ಮುಖ್ಯ ರಸ್ತೆಯಲ್ಲಿ ನೋಡ ನೋಡುತ್ತಿದಂತೆ ಬೈಕ್ ಗೆ ಮತ್ತೊಂದು ಬೈಕ್ ಡಿಕ್ಕಿ ಹೊಡೆದಿದೆ. ಈ ಭೀಕರ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸೊರಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.