ಡೈಲಿ ವಾರ್ತೆ: 23/Mar/2024

ಮಂಗಳೂರು: ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ – ಯುವಕ ಮೃತ್ಯು!

ಮಂಗಳೂರು: ನಗರದ ಪಂಪ್ವೆಲ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಯುವನೋರ್ವ ಸಾವನ್ನಪ್ಪಿದ ಘಟನೆ ಶನಿವಾರ ಮುಂಜಾನೆ ನಡೆದಿದೆ.

ಮೃತ ಯುವಕ ಬಿಜೆಪಿ ನಾಯಕಿ ತೊಕ್ಕೊಟ್ಟಿನ ಲಲಿತಾ ಸುಂದರ್ ಅವರ ಮೊಮ್ಮಗ ಶಮಿತ್ ಶೆಟ್ಟಿ (30) ಎಂದು ಗುರುತಿಸಲಾಗಿದೆ.

ಸ್ನೇಹಿತನ ಮನೆಯಲ್ಲಿ ದೈವದ ನೇಮಕ್ಕೆ ಹೋಗಿ ಬೆಳಿಗ್ಗೆ ಮರಳುವಾಗ ದುರ್ಘಟನೆ ನಡೆದಿದೆ. ಮಂಗಳೂರು ರಾಷ್ಟ್ರೀಯ ಹೆದ್ದಾರಿ 66ರ ಪಂಪ್ವೆಲ್ ಬಳಿ ಕಾರು ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿದೆ. ತೀವ್ರ ಗಾಯಗಳಿಂದಾಗಿ ಶಮಿತ್ ಶೆಟ್ಟಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.