ಡೈಲಿ ವಾರ್ತೆ: 28/Mar/2024

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: ಎ. 2 ರಂದು ಜಯಪ್ರಕಾಶ್ ಹೆಗ್ಡೆ ನಾಮಪತ್ರ ಸಲ್ಲಿಕೆ

ಉಡುಪಿ: ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಕೆ.ಜಯಪ್ರಕಾಶ್ ಹೆಗ್ಡೆ ಅವರು ಎ. 2 ರಂದು ತಮ್ಮ ನಾಮಪತ್ರವನ್ನು ಸಲ್ಲಿಸಲಿದ್ದಾರೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕಕುಮಾ‌ರ್ ಕೊಡವೂರು ತಿಳಿಸಿದ್ದಾರೆ.

ರಾಜ್ಯ ಕಾಂಗ್ರೆಸ್‌ನ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಮಾಜಿ ಸಂಸದೆ ವಿನಯಕುಮಾ‌ರ್ ಸೊರಕೆ ಅವರು ಹೊಸ ಜವಾಬ್ದಾರಿ ವಹಿಸಿಕೊಂಡ ಬಳಿಕ ಇಂದು ರಾತ್ರಿ 8:00ಗಂಟೆಗೆ ಪ್ರಥಮ ಬಾರಿಗೆ ಉಡುಪಿ ಜಿಲ್ಲೆಗೆ ಆಗಮಿಸಲಿದ್ದು, ಅವರನ್ನು ಹೆಜಮಾಡಿಯ ಟೋಲ್‌ಗೇಟ್ ಬಳಿ ಸ್ವಾಗತಿಸಿ ಉಡುಪಿಗೆ ಕರೆದುಕೊಂಡು ಬರಲಾಗುವುದು ಎಂದು ಅವರು ಹೇಳಿದ್ದಾರೆ.