ಡೈಲಿ ವಾರ್ತೆ: 28/Mar/2024

SSLC ಪರೀಕ್ಷೆ ವೇಳೆ ವಿದ್ಯಾರ್ಥಿಗಳ ಮಾರಾಮಾರಿ: ಗಲಾಟೆಯಲ್ಲಿ ಮೂವರಿಗೆ ಚಾಕು ಇರಿತ

ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆ ವೇಳೆ ಅಪ್ರಾಪ್ತ ವಿದ್ಯಾರ್ಥಿಗಳ ನಡುವೆ ಮಾರಾಮಾರಿ ನಡೆದು, ಮೂವರು ವಿದ್ಯಾರ್ಥಿಗಳಿಗೆ ಚಾಕು ಇರಿದ ಘಟನೆ ಬೆಂಗಳೂರಿನ ರಾಗಿಗುಡ್ಡ ಬಳಿ 27 ರಂದು ನಡೆದಿದೆ.

ನಿನ್ನೆ ಎಸ್ಎಸ್ಎಲ್ಸಿ ಪರೀಕ್ಷೆ ಬರೆಯಲು ಬಂದ ವೇಳೆ ಈ ದುರ್ಘಟನೆ ನಡೆದಿದ್ದು, ಬೇರೆ ಬೇರೆ ಏರಿಯಾದಿಂದ ವಿದ್ಯಾರ್ಥಿಗಳು ರಾಗಿಗುಡ್ಡದ ಪರಿಕ್ಷಾ ಕೇಂದ್ರವಾದ ಖಾಸಗಿ ಶಾಲೆಗೆ ಬಂದಿದ್ದರು. ಈ ವೇಳೆ ಕ್ಷುಲ್ಲಕ ವಿಚಾರಕ್ಕೆ ರಾಗಿಗುಡ್ಡ ಮತ್ತು ಸಾರಕ್ಕಿ ಏರಿಯಾ ವಿದ್ಯಾರ್ಥಿಗಳ ನಡುವೆ ಗಲಾಟೆ ಶುರುವಾಗಿದೆ. ಬಳಿಕ ಪರಿಕ್ಷೆ ಮುಗಿಸಿಕೊಂಡು ಹೋಗುವಾಗ ಮತ್ತೆ ಜಗಳವಾಗಿದ್ದು, ಗಲಾಟೆಯಲ್ಲಿ ಸಾರಕ್ಕಿಯ ಮೂವರು ವಿದ್ಯಾರ್ಥಿಗಳಿಗೆ ರಾಗಿ ಗುಡ್ಡದ ವಿದ್ಯಾರ್ಥಿಗಳು ಚಾಕು ಇರಿದಿದ್ದಾರೆ. ಈ ಕುರಿತು ಜೆಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.