ಡೈಲಿ ವಾರ್ತೆ: 28/Mar/2024

ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಹಿಂದುಳಿದ ವರ್ಗಗಳ ವಿಭಾಗದ ಉಪಾಧ್ಯಕ್ಷರಾಗಿ ನಾಗೇಂದ್ರ ಪುತ್ರನ್ ಆಯ್ಕೆ

ಕೋಟ: ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು ಇವರ ಅನುಮೋದನೆ ಮೇರೆಗೆ  ನಾಗೇಂದ್ರ ಪುತ್ರನ್ ರವರನ್ನು ಉಡುಪಿ ಜಿಲ್ಲೆಯ ಹಿಂದುಳಿದ ವರ್ಗಗಳ ವಿಭಾಗದ ಉಪಾಧ್ಯಕ್ಷರಾಗಿ  ನೇಮಿಸಲಾಗಿದೆ.

ನಾಗೇಂದ್ರ ಪುತ್ರನ್ ರವರಿಗೆ ಪಕ್ಷದ ಹಾಗೂ ರಾಜ್ಯ-ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾರ್ಗದರ್ಶನದಲ್ಲಿ ಮತ್ತು ಸ್ಥಳೀಯ ನಾಯಕರ ಸಹಯೋಗದಲ್ಲಿ ಹಿಂದುಳಿದ ವರ್ಗಗಳ ವಿಭಾಗದ ಪಕ್ಷದ ಸಂಘಟನೆ ಮತ್ತು ಬಲವರ್ಧನೆಗೆ ತಾವು ಕಾರ್ಯೋನ್ಮುಖರಾಗಬೇಕೆಂದು ಸೂಚಿಸಲಾಗಿದೆ.