ಡೈಲಿ ವಾರ್ತೆ: 29/Mar/2024

ಕಲಬುರಗಿ ಉಚ್ಚಾಯಿ ರಥೋತ್ಸವ ವೇಳೆ ಅವಘಡ‌: ರಥದ ಚಕ್ರಕ್ಕೆ ಸಿಲುಕಿ ಹೋಂಗಾರ್ಡ್ ಸಾವು

ಕಲಬುರಗಿ: ನಗರದಲ್ಲಿ ಇಂದಿನಿಂದ ಆರಂಭವಾದ ಶ್ರೀ ಶರಣಬಸವೇಶ್ವರ ಜಾತ್ರಾ ಮಹೋತ್ಸವದಲ್ಲಿ ಅವಘಡ‌ ಒಂದು ಸಂಭವಿಸಿದೆ. ರಥದ ಚಕ್ರಕ್ಕೆ ಸಿಲುಕಿ ಹೋಂಗಾರ್ಡ್ ದುರ್ಮರಣ ಹೊಂದಿರುವಂತಹ ಘಟನೆ ನಡೆದಿದೆ.

ಮೃತ ದುರ್ದೈವಿ ಹೋಂಗಾರ್ಡ್
ರಾಮು ಸಿದ್ದಪ್ಪ (28) ಎಂದು ತಿಳಿದು ಬಂದಿದೆ.
ಮೃತ ರಾಮು ಮೂಲತಃ ಬೀದರ್ ಜಿಲ್ಲೆಯ ಇಟಗಾ ಗ್ರಾಮದವರು. ಮತ್ತೋರ್ವ ಸಿಬ್ಬಂದಿ ಅಶೋಕರೆಡ್ಡಿಗೆ ಗಾಯಗಳಾಗಿದ್ದು, ನಗರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ರಥ ಎಳೆಯುವ ವೇಳೆ ಉಂಟಾದ ಗದ್ದಲದಲ್ಲಿ ಭಕ್ತರನ್ನ ನಿಯಂತ್ರಿಸುವ ವೇಳೆ ಚಕ್ರಕ್ಕೆ ಸಿಲುಕಿ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಆರ್‌ಜೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.