ಶಿವಮೊಗ್ಗ: MBBS ವಿದ್ಯಾರ್ಥಿಯೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ವ್ಯಾಪ್ತಿಯಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿಯನ್ನು ಪ್ರಜ್ವಲ್ ಎಂದು ಗುರುತಿಸಲಾಗಿದೆ.
ಪ್ರಜ್ವಲ್ ಸಿಮ್ಸ್ ಕಾಲೇಜಿನಲ್ಲಿ ಮೊದಲ ವರ್ಷದ MBBS ಓದುತ್ತಿದ್ದ. ಮೂಲತಃ ಮಳವಳ್ಳಿಯ ನಿವಾಸಿಯಾಗಿರುವ ಈತ ಮೂರು ದಿನದ ಹಿಂದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದನು. ಕೂಡಲೇ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ವಿದ್ಯಾರ್ಥಿ ಪ್ರಜ್ವಲ್ ಮೃತಪಟ್ಟಿದ್ದಾರೆ. ಘಟನೆ ಬಗ್ಗೆ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.