ಡೈಲಿ ವಾರ್ತೆ: 31/Mar/2024
ಬಂಟ್ವಾಳ: ಕಾಂಗ್ರೆಸ್ ಹಿಂದುಳಿದ ವರ್ಗಗಳ ಜಿಲ್ಲಾ ಉಪಾಧ್ಯಕ್ಷನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ – ಆತ್ಮಹತ್ಯೆ ಶಂಕೆ!
ಬಂಟ್ವಾಳ : ಸಾಮಾಜಿಕ ಕಾರ್ಯಕರ್ತ, ಕಾಂಗ್ರೆಸ್ ಹಿಂದುಳಿದ ವರ್ಗಗಳ ಜಿಲ್ಲಾ ಉಪಾಧ್ಯಕ್ಷ ಪದ್ಮನಾಭ ಸಾಮಂತ್ ಅವರು ಆತ್ಮಹತ್ಯೆ ಮಾಡಿಕೊಂಡ ರೀತಿಯಲ್ಲಿ ಅವರ ಶವ ಪತ್ತೆಯಾಗಿದೆ.
ವಾಮದಪದವಿನ ಅವರ ಮನೆ ಬಳಿಯ ಗುಡ್ಡದಲ್ಲಿ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ವಿವಿಧ ಸಾಮಾಜಿಕ ಹೋರಾಟಗಳಲ್ಲಿ ತೊಡಗಿಸಿಕೊಂಡಿದ್ದ ಪದ್ಮನಾಭ ಸಾಮಂತ್ ಅವರ ಸಾವು ಅನೇಕ ಊಹಪೋಹಗಳಿಗೆ ಕಾರಣವಾಗಿದೆ.
ಬಂಟ್ವಾಳದ ಅನೇಕ ಹಗರಣಗಳನ್ನು ಬಯಲಿಗೆಳೆದು ಸಾಮಾಜಿಕ ಜಾಲಾತಾಣದಲ್ಲಿ ಹರಡುತ್ತಿದ್ದರು, ಸಾಮಾಜಿಕ ಹೋರಾಟಗಳಲ್ಲಿ ತೊಡಗಿಸಿಕೊಂಡಿದ್ದ ಅವರು ಅನೇಕ ಮಂದಿ ವಿರೋಧಿಗಳನ್ನೂ ಕಟ್ಟಿಕೊಂಡಿದ್ದರು ಎನ್ನಲಾಗಿದೆ. ಪದ್ಮನಾಭ ಸಾಮಂತ್ ಅವರು ಆತ್ಮಹತ್ಯೆ ಮಾಡಿಕೊಂಡರೋ? ಅಥವಾ ಇನ್ಯಾವುದೋ ಕಾರಣಕ್ಕೆ ಕೊಲೆ ನಡೆದಿದೆಯೊ? ಎನ್ನುವುದು ತನಿಖೆಯಿಂದ ತಿಳಿದು ಬರಬೇಕಾಗಿದೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ.