ಡೈಲಿ ವಾರ್ತೆ: 03/April/2024

ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ, ಕೋಟ ಶ್ರೀನಿವಾಸ್ ಪೂಜಾರಿ ಇಂದು ನಾಮಪತ್ರ ಸಲ್ಲಿಕೆ

ಉಡುಪಿ: ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ. ಜಯಪ್ರಕಾಶ್‌ ಹೆಗ್ಡೆ ಇಂದು  11ಕ್ಕೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ.

ಬ್ರಹ್ಮಗಿರಿ ಕಾಂಗ್ರೆಸ್‌ ಭವನದಲ್ಲಿ ಬೆಳಗ್ಗೆ ಕಾರ್ಯಕರ್ತರೊಂದಿಗೆ ಸಭೆ ನಡೆಯಲಿದೆ. ಎಐಸಿಸಿ ಪ್ರ. ಕಾರ್ಯದರ್ಶಿ ರೋಝಿ ಜಾನ್‌, ಸಚಿವ ಕೆ.ಜೆ. ಜಾರ್ಜ್‌, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್‌ ಕುಮಾರ್‌ ಸೊರಕೆ, ವಿಧಾನ ಪರಿಷತ್‌ ಸದಸ್ಯ ಮಂಜುನಾಥ್‌ ಭಂಡಾರಿ, ಮಾಜಿ ಸಭಾಪತಿ ಪ್ರತಾಪ್‌ಚಂದ್ರ ಶೆಟ್ಟಿ ಮೊದಲಾದವರು ಭಾಗಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

ಇಂದು ನಾಮಪತ್ರ ಸಲ್ಲಿಸಲಿರುವ ಕೋಟ ಶ್ರೀನಿವಾಸ್ ಪೂಜಾರಿ:
ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ಇಂದು ನಾಮಪತ್ರ ಸಲ್ಲಿಸಲಿದ್ದಾರೆ.

ನಾಮಪತ್ರ ಸಲ್ಲಿಕೆ ಕಾರ್ಯಕ್ರಮದ ಪೂರ್ವಭಾವಿಯಾಗಿ ಇಂದು ಬೆಳಗ್ಗೆ 10ಕ್ಕೆ ಬಿಜೆಪಿ ಜಿಲ್ಲಾ ಕಚೇರಿ ಬಳಿ ಪಕ್ಷದ ಕಾರ್ಯಕರ್ತರ ಬೃಹತ್‌ ಸಮಾವೇಶ ನಡೆಯಲಿದೆ. ಸಮಾವೇಶ ಮುಗಿದ ಬಳಿಕ ಕೋಟ ಶ್ರೀನಿವಾಸ್ ಪೂಜಾರಿ ಅವರು ಬಿಜೆಪಿ ನಾಯಕರೊಂದಿಗೆ ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಲಿದ್ದಾರೆ.