



ಡೈಲಿ ವಾರ್ತೆ: 04/April/2024


ಉಪ್ಪಿನಂಗಡಿ: ಬಸ್ ಹಾಗೂ ಕಂಟೈನರ್ ನಡುವೆ ಅಪಘಾತ: ಹಲವರಿಗೆ ಗಾಯ!
ಉಪ್ಪಿನಂಗಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಉಪ್ಪಿನಂಗಡಿ ಉದನೆ ಬಳಿಯ ನೇಲ್ಯಡ್ಕದಲ್ಲಿ ಖಾಸಗಿ ಬಸ್ ಹಾಗೂ ಕಂಟೈನರ್ ನಡುವೆ ಢಿಕ್ಕಿ ಸಂಭವಿಸಿ ಹಲವು ಮಂದಿ ಗಾಯಗೊಂಡಿರುವ ಘಟನೆ ಗುರುವಾರ ನಡೆದಿದೆ.
ಮದುವೆ ದಿಬ್ಬಣದ ಖಾಸಗಿ ಬಸ್ ಇನ್ನೊಂದು ಬಸ್ಸನ್ನು ಓವರ್ ಟೇಕ್ ಮಾಡುವ ವೇಳೆ ಎದುರುಗಡೆಯಿಂದ ಬರುತ್ತಿದ್ದ ಕಂಟೈನರ್ ಗೆ ಢಿಕ್ಕಿ ಹೊಡೆದಿದೆ.
ಅವಘಡದಲ್ಲಿ ಬಸ್ ನಲ್ಲಿದ್ದ ಸುಮಾರು 20ಕ್ಕೂ ಹೆಚ್ಚು ಮಂದಿ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ.