ಡೈಲಿ ವಾರ್ತೆ: 30/Mar/2024

ವ್ಯಾನ್ ಗೆ ಟ್ರಕ್ ಡಿಕ್ಕಿ: ಮೂವರು ಸ್ಥಳದಲ್ಲೇ ಮೃತ್ಯು, 10 ಮಂದಿಗೆ ಗಾಯ!

ಆಂಧ್ರಪ್ರದೇಶ: ಪ್ರವಾಸಿಗರು ತೆರಳುತ್ತಿದ್ದ ವ್ಯಾನ್ ಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟು ಹತ್ತು ಮಂದಿ ಗಾಯಗೊಂಡಿರುವ ಘಟನೆ ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ಸಂಭವಿಸಿದೆ.

ಮೃತರನ್ನು ಹನುಮಂತು ಆನಂದ ರಾವ್ (45), ಹನುಮಂತು ಶೇಖರ್ ರಾವ್ (15), ಮತ್ತು ಚಿಂತಾಡಿ ಇಂದು (65) ಎನ್ನಲಾಗಿದ್ದು ಅವರು ಪಶ್ಚಿಮ ಗೋದಾವರಿ ಜಿಲ್ಲೆಗೆ ಸೇರಿದವರು ಎನ್ನಲಾಗಿದೆ. ಅಪಘಾತದಲ್ಲಿ ಗಾಯಗೊಂಡವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಘಟನೆ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.