ಡೈಲಿ ವಾರ್ತೆ: 16/April/2024

ಮನೆಯಲ್ಲಿ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ.ಜನಾರ್ದನ ಪೂಜಾರಿ

ಬಂಟ್ವಾಳ : ಕೇಂದ್ರದ ಮಾಜಿ ಸಚಿವ ಬಿ. ಜನಾರ್ಧನ ಪೂಜಾರಿಯವರ
ಬಿ.ಮೂಡಾ ಗ್ರಾಮದ ಬಸ್ತಿಪಡ್ಪುವಿನ  ತಮ್ಮ ನಿವಾಸದಲ್ಲಿ ಸೋಮವಾರ ಮತ ಚಲಾಯಿಸಿದರು.

     ಚುನಾವಣಾ ಆಯೋಗದ ನಿರ್ದೇಶನದಂತೆ ಕಳೆದ ಬಾರಿಯಂತೆ ಸೆಕ್ಟರ್‌ ಅಧಿಕಾರಿಗಳ ನೇತೃತ್ವದಲ್ಲಿ ಮತಗಟ್ಟೆ ಅಧಿಕಾರಿಗಳ ತಂಡ ಮನೆ-ಮನೆಗೆ ತೆರಳಿ ಮತದಾನ ಮಾಡಿಸುತ್ತಿದೆ. ಲೋಕಸಭಾ ಚುನಾವಣೆ 2024 ಕ್ಕೆ ಸಂಬಂಧಿಸಿದಂತೆ 205-ಬಂಟ್ವಾಳ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 85 ವರ್ಷಕ್ಕೆ ಮೇಲ್ಪಟ್ಟ ಮತ್ತು ಶೇಕಡಾ 40 ಕ್ಕಿಂತ ಹೆಚ್ಚಿನ ಅಂಗವೈಕಲ್ಯತೆ ಹೊಂದಿದ ಮತದಾರರ ಮನೆಗಳಿಗೆ ಮತಗಟ್ಟೆ ಅಧಿಕಾರಿಗಳ ತಂಡವು ತೆರಳಿ ಮತದಾನ ಮಾಡಿಸುವ ಪ್ರಕ್ರಿಯೆ ಆರಂಭಗೊಂಡಿದ್ದು ಮತದಾರರ ಪಟ್ಟಿಯಂತೆ ಪೂಜಾರಿ ಅವರಿಗೆ 87 ವರ್ಷ ವಯಸ್ಸಾಗಿದ್ದು
ಮತದಾನ ಪ್ರಕ್ರಿಯೆ ನಡೆಸಲಾಯಿತು.

  ಈ ಹಿಂದೆ ಅವರು ಭಂಡಾರಿಬೆಟ್ಟು ಶಾಲೆಯ ಭಾಗಸಂಖೈ 130 ಮತಗಟ್ಟೆಗೆ ತೆರಳಿ ಮತದಾನ ಮಾಡುತ್ತಿದ್ದರು.