ಡೈಲಿ ವಾರ್ತೆ: 17/April/2024

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಚುನಾವಣಾ ಕಣಕ್ಕೆ ಪಕ್ಷೇತರ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ ನಡುವೆ ಮತ್ತೊಬ್ಬರು ಅಭ್ಯರ್ಥಿ ಡಿ.ಎಸ್. ಈಶ್ವರಪ್ಪ ಎಂಟ್ರಿ!

ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಚುನಾವಣಾ ಕಣಾ ದಿನಕ್ಕೊಂದು ಹೊಸ ಟ್ವಿಸ್ಟ್‌ ನೀಡುತ್ತಿದೆ. ಅದರಲ್ಲಿಯು ಶಿವಮೊಗ್ಗ ಈ ಸಲ ಒಂದೇ ಹೆಸರಿನ ಮತ್ತೊಬ್ಬರು ಚುನಾವಣೆ ಎದುರಿಸುವುದಕಕ್ಕೆ ಸಾಕ್ಷಿಯಾಗುತ್ತಿದೆ. ಇದಕ್ಕೆ ಪೂರಕ ಎಂಬಂತೆ  ಶಿವಮೊಗ್ಗ ಲೋಕಸಭಾ ಕ್ಷೇತ್ರದ ಚುನಾವಣಾ ಕಣಕ್ಕೆ ಮತ್ತೊಬ್ಬರು ಈಶ್ವರಪ್ಪ ಎಂಟ್ರಿ ಕೊಟ್ಟಿದ್ದಾರೆ.

ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ನಿನ್ನೆ ಮಂಗಳವಾರ ಡಿ.ಎಸ್.ಈಶ್ವರಪ್ಪ ಎಂಬುವವರು ನಾಮಪತ್ರ ಸಲ್ಲಿಸಿದ್ದಾರೆ. ಬಿಜೆಪಿ ವಿರುದ್ಧ ಬಂಡಾಯ ಸಾರಿರುವ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಕೂಡ ಪಕ್ಷೇತರ ಅಭ್ಯರ್ಥಿಯಾಗಿ ಕಣದಲ್ಲಿದ್ದಾರೆ. ನಿನ್ನೆ ನಾಮಪತ್ರ ಸಲ್ಲಿಸಿದವರು ಡಿಎಸ್‌ ಈಶ್ವರಪ್ಪ. ಇವರು ಶಿವಮೊಗ್ಗ ಜಿಲ್ಲೆ ಶಿಕಾರಿಪುರದವರು.