



ಡೈಲಿ ವಾರ್ತೆ: 19/April/2024


ಉಡುಪಿ:ಬೈಕ್ ಗೆ ಟಿಪ್ಪರ್ ಡಿಕ್ಕಿ- ಬೈಕ್ ಸವಾರ ಸ್ಥಳದಲ್ಲೇ ಮೃತ್ಯು!
ಉಡುಪಿ: ಬೈಕ್ ಗೆ ಟಿಪ್ಪರ್ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉಡುಪಿಯ ಅಂಬಾಗಿಲು– ಉಡುಪಿ ಮುಖ್ಯ ರಸ್ತೆಯಲ್ಲಿ
ಶುಕ್ರವಾರ ನಡೆದಿದೆ.
ಮೃತ ಬೈಕ್ ಸವಾರನನ್ನು ಬ್ರಹ್ಮಾವರದ ಮಟಪಾಡಿ ಮೂಲದ ಪ್ರಭಾಕರ ಆಚಾರಿ ಎಂದು ಗುರುತಿಸಲಾಗಿದೆ.
ಅವರು ಪೆರಂಪಳ್ಳಿ ಕಡೆಯಿಂದ ಅಂಬಾಗಿಲು ಮುಖ್ಯ ರಸ್ತೆಗೆ ಬರುತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.
ಅಪಘಾತದ ರಭಸಕ್ಕೆ ಬೈಕ್ ಟಿಪ್ಪರ್ ನ ಅಡಿ ಭಾಗಕ್ಕೆ ಬಿದ್ದಿದೆ. ಬೈಕ್ ನಲ್ಲಿದ್ದ ಸಹಸವಾರ ತೀವ್ರ ರೀತಿಯಲ್ಲಿ ಗಾಯಗೊಂಡಿದ್ದಾರೆ. ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.