ಡೈಲಿ ವಾರ್ತೆ: 20/April/2024

ನೇಹಾ ಹತ್ಯೆ ಕೇಸ್: ಎಬಿವಿಪಿಯಿಂದ ಗೃಹಸಚಿವರ ಮನೆ ಮುತ್ತಿಗೆಗೆ ಯತ್ನ

ಬೆಂಗಳೂರು: ಹುಬ್ಬಳ್ಳಿಯ ನೇಹಾ ಹತ್ಯೆ ಪ್ರಕರಣ ಖಂಡಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ (ABVP) ಇಂದು ಪ್ರತಿಭಟನೆಗೆ ಮುಂದಾಗಿದ್ದು, ಬೆಂಗಳೂರಿನಲ್ಲಿರುವ ಗೃಹಸಚಿವ ಜಿ.ಪರಮೇಶ್ವರ್ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.

ಶನಿವಾರ ಬೆಳಗ್ಗೆ ಗೃಹ ಸಚಿವರ ಮನೆಗೆ ಮುತ್ತಿಗೆ ಹಾಕಲು ಎಬಿವಿಪಿ ಮುಂದಾಗಿದೆ. ನಾಳೆ (ಭಾನುವಾರ) ರಾಜ್ಯಾದ್ಯಂತ ಪ್ರತಿಭಟನೆಗೆ ಎಬಿವಿಪಿ ಕರೆ ಕೊಟ್ಟಿದೆ. ಬೆಂಗಳೂರಿನಲ್ಲೂ ಹತ್ಯೆ ಖಂಡಿಸಿ ಎಬಿವಿಪಿ ಹೋರಾಟ ನಡೆಸಲಿದೆ.

ಇನ್ನು ಈ ಪ್ರಕರಣವನ್ನು ಫಾಸ್ಟ್ ಟ್ರ್ಯಾಕ್ ಕೋರ್ಟ್‌ಗೆ ವರ್ಗಾವಣೆ ಮಾಡುವಂತೆ ಒತ್ತಾಯಿಸಿ ರಾಜ್ಯಾದ್ಯಂತ ಪ್ರತಿಭಟನೆ ನಡೆಯಲಿದೆ. ಸದ್ಯ ಗೃಹಸಚಿವ ಪರಮೇಶ್ವರ್ ಅವರ ಮನೆ ಮುಂದೆ ಪ್ರತಿಭಟನೆ ನಡೆಸಿ ಮುತ್ತಿಗೆ ಹಾಕಲು ಯತ್ನಿಸಿದವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.