ಡೈಲಿ ವಾರ್ತೆ: 20/April/2024

ನಿಟ್ಟೂರಿನಲ್ಲಿ ಬೈಕ್ ಗೆ ಬಸ್ ಢಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು

ಉಡುಪಿ: ನಿಟ್ಟೂರು ಪೆಟ್ರೋಲ್ ಪಂಪ್ ಬಳಿ ಬಸ್ ಮತ್ತು ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಬ್ಯೆಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಶನಿವಾರ ಸಂಜೆ ನಡೆದಿದೆ.

ಬಸ್ ಕರಾವಳಿ ಬೈಪಾಸ್ ಮಾರ್ಗವಾಗಿ ಸಂತೆಕಟ್ಟೆಯತ್ತ ತೆರಳುತ್ತಿತ್ತು. ಈ ವೇಳೆ  ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ನಡೆದ ಬಳಿಕ ಕೆಲ ಕಾಲ ಸಂಚಾರ ದಟ್ಟಣೆ ಉಂಟಾಯಿತು.

ಸಂಚಾರಿ ಪೊಲೀಸರು ಸ್ಥಳಕ್ಕಾಗಮಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ಮೃತ ದುರ್ದೈವಿ ಬಾಗಲಕೋಟೆ ಮೂಲದವರು ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.