



ಡೈಲಿ ವಾರ್ತೆ: 26/April/2024


ಪಡುಬಿದ್ರಿ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ವಿದ್ಯುತ್ ಕಂಬಕ್ಕೆ ಢಿಕ್ಕಿ – ಮಹಿಳೆ ಮೃತ್ಯು!
ಪಡುಬಿದ್ರಿ: ಮಂಗಳೂರಿನಿಂದ ಕಾರ್ಕಳ ಮಾಳದತ್ತ ಹೋಗುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಶುಕ್ರವಾರ ನಂದಿಕೂರು ಮುದರಂಗಡಿ ಕ್ರಾಸ್ ಬಳಿ ನಡೆದಿದೆ.
ಮೃತ ಮಹಿಳೆ ಸುಮಂಗಲಾ ಅಭ್ಯಂಕರ್(51) ಎಂದು ಗುರುತಿಸಲಾಗಿದೆ.
ಮಾಳದಲ್ಲಿ ನಡೆಯುತ್ತಿದ್ದ ಉಪನಯನ ಸಮಾರಂಭದಲ್ಲಿ ಭಾಗವಹಿಸಲು ಮಂಗಳೂರು ಕಾವೂರಿನ ತಮ್ಮ ನಿವಾಸದಿಂದ ತೆರಳುತ್ತಿದ್ದರು. ಪತಿ ಪುರುಷೋತ್ತಮ ಅಭ್ಯಂಕರ್(61) ಅವರು ರಾಜ್ಯ ಹೆದ್ದಾರಿಯಲ್ಲಿ ವೇಗವಾಗಿ ಬರುತ್ತಿದ್ದಾಗ ನಿಯಂತ್ರಣ ತಪ್ಪಿ ಈ ಅಪಘಾತವು ಸಂಭವಿಸಿದೆ.
ಸ್ಥಳೀಯರು ಪ್ರಯತ್ನಪಟ್ಟು ಸುಮಂಗಲಾ ಅವರನ್ನು ಹೊರತೆಗೆದಿದ್ದರೂ ಆಸ್ಪತ್ರೆಗೆ ಕೊಂಡೊಯ್ಯುವ ದಾರಿ ಸಾವನ್ನಪ್ಪಿದ್ದಾರೆ.
ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.