ಡೈಲಿ ವಾರ್ತೆ: 27/April/2024
ರಾಜ್ಯದಲ್ಲಿ ಎರಡನೇ ಹಂತದ ಚುನಾವಣೆಗೆ ಸಿದ್ದತೆ ನಡೆಸುತ್ತಿರುವ ಚುನಾವಣಾ ಆಯೋಗ
ಬೆಂಗಳೂರು: ರಾಜ್ಯದಲ್ಲಿ ಮೊದಲ ಹಂತದ ಮತದಾನ ಯಶಸ್ವಿಯಾಗಿ ನಡೆದಿದೆ. ಆದ್ದರಿಂದ ಎರಡನೇ ಹಂತದ ಚುನಾವಣೆಗೆ ಸಿದ್ಧತೆ ನಡೆಯುತ್ತಿದೆ.
ಎರಡನೇ ಹಂತದ ಮತದಾನ ಮೇ 7 ರಂದು ನಡೆಯಲಿದೆ. ಹಾಗಾಗಿ ಚುನಾವಣಾ ಆಯೋಗ ಸಿದ್ಧತೆ ನಡೆಸುತ್ತಿದೆ.
ರಾಜ್ಯದಲ್ಲಿ ಎರಡನೇ ಹಂತದ ಲೋಕಸಭಾ ಚುನಾವಣೆ ಇರುವಾಗ ಇದೀಗ ಮತದಾನದ ದಿನದಂದು ಸಾರ್ವತ್ರಿಕ ರಜೆ ಘೋಷಿಸಲು ಆದೇಶ ಹೊರಡಿಸಿದೆ.
ಯಾವ ಯಾವ ಜಿಲ್ಲೆಗೆ ರಜೆ ಘೋಷಣೆ ಮಾಡಲಾಗಿದೆ ಇಲ್ಲಿದೆ ಮಾಹಿತಿ: ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ಬಿಜಾಪುರ, ಗುಲ್ಬರ್ಗಾ, ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರಕನ್ನಡ, ದಾವಣಗೆರೆ, ಶಿವಮೊಗ್ಗ ಜಿಲ್ಲೆಗಳು ಸೇರಿವೆ.
ಸರಕಾರಿ ಕಚೇರಿ, ಶಾಲಾ ಕಾಲೇಜ್, ಸರಕಾರಿ ಸ್ವಾಮ್ಯದ ಸಂಸ್ಥೆ ಜೊತೆಗೆ ವ್ಯವಹಾರಿಕ ಸಂಸ್ಥೆಗಳಿಗೂ ರಜೆ ಘೋಷಣೆಯಾಗಲಿದೆ. ಈ ಆದೇಶ ಜಿಲ್ಲೆಯ ಜನಸಾಮಾನ್ಯರಿಗೆ ಮತದಾನ ಮಾಡಲು ಅನುಕೂಲವಾಗುವ ದೃಷ್ಟಿಯಿಂದ ಮಾಡಲಾಗಿದೆ.