ಹಾಸನ ಸಂಸದರಾದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರಕಾರವು ವಿಶೇಷ ತನಿಖಾ ತಂಡ ರಚಿಸಲು ತೀರ್ಮಾನಿಸಿದೆ.
ಹಾಸನ ಜಿಲ್ಲೆಯಲ್ಲಿ ಅಶ್ಲೀಲ ವೀಡಿಯೋ ತುಣುಕುಗಳು ಹರಿದಾಡುತ್ತಿದ್ದು, ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಈ ಹಿನ್ನೆಲೆಯಲ್ಲಿ ಎಸ್.ಐ.ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದ ಅಧ್ಯಕ್ಷರು ಸರ್ಕಾರಕ್ಕೆ ಪತ್ರ ಬರೆದಿದ್ದರು. ಅವರ ಮನವಿಗೆ ಸ್ಪಂದಿಸಿ ಈ ನಿರ್ಣಯ ಕೈಗೊಳ್ಳಲಾಗಿದೆ.
ಪ್ರಕರಣದ ವಿವರ ಇಲ್ಲಿದೆ :
ಹಾಸನ ಜಿಲ್ಲೆಯಲ್ಲಿ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ವಿಡಿಯೋಗಳು ಭಾರೀ ವೈರಲ್ ಆಗಿದ್ದವು. ಚುನಾವಣೆ ಮುನ್ನ ಕೆಲವೆಡೆ ಪ್ರಜ್ವಲ್ ಜತೆ ಅನೇಕ ಮಹಿಳೆಯರ ವಿಡಿಯೋ ವೈರಲ್ ಆಗಿತ್ತು. ಆದರೆ ಡೀಪ್ ಫೇಕ್ ಮಾಡಿ ಅವಹೇಳನ ಮಾಡಲಾಗಿದೆ ಎಂದು ಪ್ರಜ್ವಲ್ ರೇವಣ್ಣ ಪರವಾಗಿ ಈಗಾಗಲೇ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ರಾಜ್ಯದಲ್ಲಿ ಈ ಬಗ್ಗೆ ಹಸಿಬಿಸಿ ಚರ್ಚೆ ಕಾವು ಪಡೆದಿದೆ.