ಡೈಲಿ ವಾರ್ತೆ: 29/April/2024

ತೆಗ್ಗಿನಭಾವನೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡಿಸುವ ನಮ್ಮ ನಡೆ ಮತದಾನದ ಕಡೆ ಕಾರ್ಯಕ್ರಮ

ಮತದಾನದ ಬಗ್ಗೆ ಜಾಗೃತಿ ಮೂಡಿಸುವ ನಮ್ಮ ನಡೆ ಮತದಾನದ ಕಡೆ ಕಾರ್ಯಕ್ರಮವು
ಶಿರಹಟ್ಟಿ ತಾಲೂಕಿನ ತೆಗ್ಗಿನಭಾವನೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು

18 ವರ್ಷ ತುಂಬಿದ ಪ್ರತಿಯೊಬ್ಬ ನಾಗರಿಕರಿಗೂ ಮತದಾನ ಹಕ್ಕು ಉಂಟು ಆದ್ದರಿಂದ ಮತದಾನ ಮಾಡುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಅದಕ್ಕಾಗಿ ಜನರಲ್ಲಿ ಮತದಾನದ ಮಹತ್ವ ತಿಳಿಸಿ ಜಾಗೃತಿ ಮೂಡಿಸುವ ಉದ್ದೇಶದಿಂದ ಗದಗ್ ಜಿಲ್ಲಾ ಸ್ವೀಪ್ ಸಮಿತಿ ಎಲ್ಲ ಮತಗಟ್ಟೆ ಕೇಂದ್ರಗಳಲ್ಲಿ ಧ್ವಜಾರೋಹಣ ಮಾಡುವ ಮೂಲಕ “ನಮ್ಮ ನಡೆ ಮತಗಟ್ಟೆ ಕಡೆ” ಎಂಬ ಕಾರ್ಯ ಕ್ರಮ ಹಮ್ಮಿಕೊಳ್ಳಬೇಕೆಂಬ ನಿರ್ದೇಶನದ ಹಿನ್ನೆಲೆಯಲ್ಲಿ
ಶಿರಹಟ್ಟಿ ತಾಲೂಕಿನ ತೆಗ್ಗಿನಭಾವನೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.   

ಈ ಸಂದರ್ಭದಲ್ಲಿ ಮತಗಟ್ಟೆ ಬಿ ಎಲ್ ಓ ಎನ್. ಆರ್. ಕಾರಬೂದಿ ಮತದಾನದ ಮಹತ್ವದ ಕುರಿತು ಮಾತನಾಡಿ ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಬೇಕೆಂದು ಹೇಳಿದರು. ಈ ಸಂದರ್ಭದಲ್ಲಿ ಶಾಲಾ ಪ್ರಧಾನ ಗುರುಗಳು ಮಾತನಾಡಿ “ನಮ್ಮೆಲ್ಲರ ನಡೆ ಮತಗಟ್ಟೆಯ ಕಡೆ” ನಿಮ್ಮ ಮತ ಗೌಪ್ಯವಾಗಿರಲಿ ಎಂಬ ಇತ್ಯಾದಿ ಘೋಷಣೆಗಳನ್ನು ಹೇಳಿಸಿದರು. ಈ ಸಂದರ್ಭದಲ್ಲಿ ಗ್ರಾಮದ ಗುರುಹಿರಿಯರು, ಯುವ ಮತದಾರರು ಭಾಗವಹಿಸಿದ್ದರು ಈ ಸಂದರ್ಭದಲ್ಲಿ ಮತದಾನ ಜಾಗೃತಿ ಮೂಡಿಸುವ ಧ್ವಜಾರೋಹಣ ನೆರವೇರಿಸಲಾಯಿತು.