ಡೈಲಿ ವಾರ್ತೆ: 30/April/2024

ಶಿವಮೊಗ್ಗ: ಮೊಬೈಲ್ ಅಂಗಡಿಯಲ್ಲಿ ಅಗ್ನಿ ದುರಂತ- ಲಕ್ಷಾಂತರ ರೂ. ನಷ್ಟ!

ಶಿವಮೊಗ್ಗ:  ನಗರದ ಖಾಸಗಿ ಬಸ್‌ ನಿಲ್ದಾಣದಲ್ಲಿರುವ ಮೊಬೈಲ್ ಅಂಗಡಿಯಲ್ಲಿ ಅಗ್ನಿ ದುರಂತಗೊಂಡು ಲಕ್ಷಾಂತರ ರೂ. ವಸ್ತುಗಳು ಬೆಂಕಿಗಾಹುತಿಯಾದ ಘಟನೆ ಸೋಮವಾರ ರಾತ್ರಿ 11 ಗಂಟೆ ಸುಮಾರಿಗೆ ನಡೆದಿದೆ.

ಅಂಗಡಿಯಲ್ಲಿರುವ ವಸ್ತುಗಳು ಸಂಪೂರ್ಣ ಸುಟ್ಟು ಹೋಗಿದ್ದು ಅಂದಾಜು 3 ಲಕ್ಷ ರೂ. ನಷ್ಟ ಸಂಭವಿಸಿದೆ ಎಂದು ತಿಳಿದು ಬಂದಿದೆ. ಸೈಯದ್ ವಾಸಿಂ ಎಂಬುವವರು ಅಂಗಡಿಮಾಲೀಕರಾಗಿದ್ದಾರೆ.
ಬೆಂಕಿ ದುರಂತಕ್ಕೆ ವಿದ್ಯುತ್ ಶಾರ್ಟ್ ಸರ್ಕಿಟ್ ಎಂದು ಮೇಲ್ನೋಟಕ್ಕೆ ಕಂಡು ಬಂದಿರುತ್ತದೆ.
ಈ ವಿಚಾರ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ. ಹೆಚ್ಚಿನ ಮಾಹಿತಿ ಬರಬೇಕಾಗಿದೆ.