ಡೈಲಿ ವಾರ್ತೆ: 30/April/2024

ಮಲ್ಪೆ: ಸಮುದ್ರ ಪಾಲದ ಬಾಲಕನ ರಕ್ಷಣೆ ಮಾಡಿದ ಮಲ್ಪೆ ಲೈಫ್ ಗಾರ್ಡ್ ಸಿಬ್ಬಂದಿಗಳು

ಮಲ್ಪೆ: ಚಿಕ್ಕಬಳ್ಳಾಪುರ ಮೂಲದ ಶ್ರೇಯಸ್ (12)  ಸಮುದ್ರದಲ್ಲಿ ಆಟವಾಡುತ್ತಿದ್ದ ವೇಳೆ ನೀರಿನಲ್ಲಿ ಮುಳುಗಿದ್ದು ತಕ್ಷಣ ಮಲ್ಪೆ ಲೈಫ್ ಗಾರ್ಡ್ ಸಿಬ್ಬಂದಿಗಳು ಬಾಲಕನನ್ನು ರಕ್ಷಣೆ ಮಾಡಿದ ಘಟನೆ ಮಂಗಳವಾರ ಮಲ್ಪೆ ಬೀಚ್ ನಲ್ಲಿ ನಡೆದಿದೆ.

ಶ್ರೇಯಸ್ ಕುಟುಂಬದೊಂದಿಗೆ ಮಲ್ಪೆ ಬೀಚ್ ಗೆ ಬಂದಿದ್ದು. ಸಮುದ್ರದಲ್ಲಿ ಈತ ಆಟವಾಡುತ್ತಿದ್ದಾಗ ಆಕಸ್ಮಾತ್ತಾಗಿ  ನೀರಿನಲ್ಲಿ ಮುಳುಗಿದ್ದಾನೆ. ತಕ್ಷಣ ಮಲ್ಪೆ ಲೈಫ್ ಗಾರ್ಡ್ ಸಿಬ್ಬಂದಿಗಳು ಬಾಲಕನನ್ನು ರಕ್ಷಣೆ ಮಾಡಿದ್ದಾರೆ.
ಅನಂತರ ಪ್ರಾಥಮಿಕ ಚಿಕಿತ್ಸೆಯ ಬಳಿಕ ಬಾಲಕ ಕುಟುಂಬದವರೊಂದಿಗೆ ತೆರಳಿದ್ದಾನೆ. ಮಲ್ಪೆ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.