ಡೈಲಿ ವಾರ್ತೆ: 03/ಮೇ /2024

ಕಲ್ಯಾಣ್ ಜ್ಯುವೆಲರ್ಸ್ ಅಂಗಡಿಯಲ್ಲಿ ಏರ್ ಕಂಡಿಷನರ್ ಸ್ಫೋಟ , 6 ಮಂದಿಗೆ ಗಾಯ ಒಬ್ಬನ ಸ್ಥಿತಿ ಗಂಭೀರ

ಬಳ್ಳಾರಿ:ಬಳ್ಳಾರಿ ನಗರದ ರಥಬೀದಿಯ ಮಾರ್ಟಿನ್ ರಸ್ತೆಯಲ್ಲಿರುವ ಕಲ್ಯಾಣ್ ಜ್ಯುವೆಲರ್ಸ್ ಮಳಿಗೆಯಲ್ಲಿ ಎಸಿ ಸ್ಫೋಟಗೊಂಡಿದ್ದು, ಇದನ್ನು ದುರಸ್ತಿಗೊಳಿಸಲು ಬಂದಿದ್ದ ನಿಂಗಪ್ಪ, ಸೈಯದ್ ಝುಬೇರ್ ಎಂಬವರಿಗೆ ಗಂಭೀರ ಗಾಯವಾಗಿದೆ.  ಗಾಯಾಳುಗಳನ್ನು ನಗರದ ವಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

6 ಮಂದಿ ಗಾಯಗೊಂಡು ಓರ್ವ ಸ್ಥಿತಿ ಗಂಭೀರವಾಗಿದೆ.
ಜ್ಯುವೆಲರ್ಸ್ ಮಳಿಗೆಯಲ್ಲಿ ಕಳೆದ ಕೆಲ ದಿನಗಳಿಂದ ಸೆಂಟ್ರಲೈಜ್ ಎಸಿಯಲ್ಲಿ ಗ್ಯಾಸ್ ಖಾಲಿಯಾಗಿತ್ತು. ಗ್ಯಾಸ್ ಭರ್ತಿ ಮಾಡಲು ಇಬ್ಬರು ಕಾರ್ಮಿಕರು ಮಳಿಗೆಗೆ ಬಂದಿದ್ದರು. ಎಸಿಗೆ ಗ್ಯಾಸ್ ತುಂಬಿಸುವಾಗ ಸ್ಪೋಟಗೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಗ್ನಿಶಾಮಕ ದಳ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದರು.

ಬ್ರೂಸ್‌ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಘಟನೆಯ ವಿಡಿಯೋ ವೈರಲ್ ಆಗಿದ್ದು, ಅಂಗಡಿ ಮತ್ತು ಸುತ್ತಮುತ್ತಲಿನ ಕಿಟಕಿಗಳು ಒಡೆದು ಹೋಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಂತಾಜನಕ ಸ್ಥಿತಿಯಲ್ಲಿದ್ದಾರೆ.