ಡೈಲಿ ವಾರ್ತೆ: 07/ಮೇ /2024

ತವರೂರಲ್ಲಿ ಮತದಾನ ಮಾಡಿದ ಪ್ರಧಾನಿ ಮೋದಿ

ಗಾಂಧೀನಗರ: ದೇಶದ ಸಾರ್ವತ್ರಿಕ ಚುನಾವಣೆಗೆ ಇಂದು ಮೂರನೇ ಹಂತದ ಮತದಾನ ನಡೆಯುತ್ತಿದ್ದು, ತವರು ಗುಜರಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಹಕ್ಕು ಚಲಾಯಿಸಿದ್ದಾರೆ.

ಗುಜರಾತ್‌ನ ಅಹಮದಾಬಾದ್‌ನಲ್ಲಿ ನಿಶಾನ್‌ ಹಿರಿಯ ಪ್ರಾಥಮಿಕ ಶಾಲೆಯಲ್ಲಿದ್ದ ಮತಗಟ್ಟೆಗೆ ತೆರಳಿ ಪ್ರಧಾನಿ ಮೋದಿ ಅವರು ಮತ ಚಲಾಯಿಸಿದ್ದಾರೆ.

ಮಂಗಳವಾರ ಬೆಳಗ್ಗೆ ರಾಜಭವನದಿಂದ ಹೊರಟು ಪ್ರಧಾನಿ ಚಲಾಯಿಸಿದರು. ನಂತರ ಮತದಾನ ಮಾಡಿದ ಶಾಹಿ ತೋರಿಸಿ ಮತದಾನ ಮಾಡುವಂತೆ ಪ್ರೇರೇಪಿಸಿದರು.

ಮತದಾನ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಪ್ರಧಾನಿ, ಇಂದು ಮೂರನೇ ಹಂತದ ಮತದಾನ ನಡೆಯುತ್ತಿದೆ. ಜನರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಮತದಾನ ಮಾಡಬೇಕು. ಉತ್ಸಾಹದಲ್ಲಿ ಬಂದು ಮತದಾನ ಮಾಡಬೇಕು. ಬೇರೆ ದೇಶಗಳಿಗೆ ಹೋಲಿಸಿದರೆ ಭಾರತದಲ್ಲಿ ಚುನಾವಣಾ ಪ್ರಕ್ರಿಯೆಯಲ್ಲಿ ಹೆಚ್ಚು ಉತ್ಸಾಹ ಇದೆ. ಎಲ್ಲ ರೀತಿಯ ವ್ಯವಸ್ಥೆಯನ್ನು ಆಯೋಗ ಮಾಡಿದೆ. ಆಯೋಗ ಪ್ರಶಂಸೆಗೆ ಅರ್ಹ. ಗುಜರಾತ್ ಎಲ್ಲಿಲ್ಲಿ ಮತದಾನ ಇದೆ, ಜನರು ಹೆಚ್ಚು ಮತದಾನ ಮಾಡಿ. ಚುನಾವಣೆಯನ್ನು ಉತ್ಸವ ರೀತಿಯಲ್ಲಿ ಆಚರಿಸಿ ಎಂದು ಜನತೆಗೆ ಕರೆ ನೀಡಿದರು.