ಡೈಲಿ ವಾರ್ತೆ: 07/ಮೇ /2024
ಬಿ.ಸಿ.ರೋಡಿನ ಹೋಟೆಲಿನಲ್ಲಿ ತಂಗಿದ್ದ ಅವಿವಾಹಿತ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ
ಬಂಟ್ವಾಳ : ಬಿ.ಸಿ.ರೋಡಿನ ಹೋಟೆಲಿನಲ್ಲಿ ತಂಗಿದ್ದ ಅವಿವಾಹಿತ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ಮಂಗಳವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ.
ಮಂಗಳೂರು ಅತ್ತಾವರ ನಿವಾಸಿ ಪ್ರಜ್ವಲ್ (30) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.
ಮೇ. 5 ರಂದು ಬಿ.ಸಿ.ರೋಡಿನ ಖಾಸಗಿ ಬಸ್ ನಿಲ್ದಾಣದ ಬಳಿಯಿರುವ ಹೋಟೆಲ್ ಕೃಷ್ಣಿಮಾದಲ್ಲಿ ರೂಮ್ ಮಾಡಿದ್ದ ಈತ ಮೇ.6 ರಂದು ರಾತ್ರಿ ಊಟ ಮುಗಿಸಿ, ಬಾಗಿಲು ಹಾಕಿಕೊಂಡಿದ್ದ. ಇಂದು ಬೆಳಿಗ್ಗೆ ರೂಮ್ ಬಾಗಿಲು ತೆರೆಯದೇ ಇದ್ದು, ಹೋಟೆಲ್ ಸಿಬ್ಬಂದಿಗಳು ಕರೆದರೂ ಯಾವುದೇ ಸ್ಪಂದನೆ ಇಲ್ಲದ ಕಾರಣ ಪೊಲೀಸರಿಗೆ ಮಾಹಿತಿ ನೀಡಿ ಬಾಗಿಲು ತೆರೆದಾಗ ನೇಣು ಬಿಗಿದ ಸ್ಥಿತಿಯಲ್ಲಿ ಈತನ ಮೃತದೇಹದ ಪತ್ತೆಯಾಗಿದೆ, ಓನ್ ಲೈನ್ ಕಂಪೆನಿಯೊಂದರಲ್ಲಿ ಉದ್ಯೋಗದಲ್ಲಿದ್ದ ಪ್ರಜ್ವಲ್ ಇತ್ತೀಚಿನ ದಿನಗಳಲ್ಲಿ ಮಾನಸಿಕವಾಗಿ ತೀವ್ರವಾಗಿ ನೊಂದಿದ್ದ ಎನ್ನಲಾಗಿದೆ.
ತಾನು ಕೆಲಸ ಮಾಡಿಕೊಂಡಿದ್ದ ಕಂಪೆನಿಯ ಮಾಲಕರಿಂದ 60 ಸಾವಿರ ಸಾಲ ಪಡೆದು ಬಳಿಕ ಹಣ ಹೊಂದಿಸಲಾಗದೆ ಸರಿಯಾದ ಸಮಯಕ್ಕೆ ಹಿಂದಿರುಗಿಸಲಾಗಿಲ್ಲ ಎಂಬ ಕಾರಣಕ್ಕೆ ಕೊರುಗುತ್ತಿದ್ದ ಎಂದು ತಿಳಿದುಬಂದಿದೆ. ಸಾಲದ ವಿಚಾರವಲ್ಲದೆ ಪ್ರೀತಿಸಿದ ಯುವತಿ ಕೈಕೊಟ್ಟಿದ್ದು, ಪ್ರೇಮ ವೈಫಲ್ಯದ ಕಾರಣವನ್ನು ಎದುರಿಸುತ್ತಿದ್ದ ಎಂದು ಮೂಲಗಳು ತಿಳಿಸಿವೆ.
ಮಾನಸಿಕವಾಗಿ ನೊಂದ ಕಾರಣ ಈತ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣವಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದು, ಆತ್ಮಹತ್ಯೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಘಟನಾ ಸ್ಥಳಕ್ಕೆ ಬಂಟ್ವಾಳ ನಗರ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ಆನಂತಪದ್ಮನಾಭ ಬೇಟಿ ನೀಡಿದ್ದಾರೆ.