ಡೈಲಿ ವಾರ್ತೆ: 07/ಮೇ /2024
ಬಂಟ್ವಾಳ : ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಚಿನ್ನದ ಸರ ಕಳವು,
ಬಂಟ್ವಾಳ : ಸರಕಾರಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಚಿನ್ನದ ಸರ ಕಳವಾಗಿರುವ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಮಂಗಳವಾರ ದೂರು ದಾಖಲಾಗಿದೆ.
ಮಂಗಳೂರು ತಾಲೂಕು ಏಳಿಂಜೆ ನಿವಾಸಿ ಸೆಲಿನ್ ಮೊರಾಸ್ ಎಂಬವರು ಈ ಬಗ್ಗೆ ದೂರು ನೀಡಿದ್ದು, ಇವರು ಮಂಗಳವಾರ ಬೆಳಿಗ್ಗೆ ಸುಮಾರು 10.30 ರ ವೇಳೆಗೆ ಮಿತ್ತೂರಿನಿಂದ ಬಿ.ಸಿ.ರೋಡಿಗೆ ಸರಕಾರಿ ಬಸ್ ನಲ್ಲಿ ಪ್ರಯಾಣಿಸಿದ್ದು ಈ ವೇಳೆ ತಾನು ಧರಿಸಿದ್ದ 22 ಗ್ರಾಂ ತೂಕದ ಚಿನ್ನದ ಸರ ಕಳುವಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಬಂಟ್ವಾಳ ಪೊಲೀಸರು ದೂರು ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸುತ್ತಿದ್ದಾರೆ.