



ಡೈಲಿ ವಾರ್ತೆ: 08/ಮೇ /2024


ಮಲ್ಪೆ: ಸಮುದ್ರದ ಅಲೆಗೆ ಸಿಲುಕಿ ನೀರು ಪಾಲಾಗುತ್ತಿದ್ದ ಇಬ್ಬರು ಯುವಕರ ರಕ್ಷಣೆ!
ಉಡುಪಿ: ಸಮುದ್ರ ಪಾಲಾಗುತ್ತಿದ್ದ ಇಬ್ಬರು ಯುವಕರನ್ನು ರಕ್ಷಿಸಿದ ಘಟನೆ ಉಡುಪಿ ಜಿಲ್ಲೆಯ ಮಲ್ಪೆ ಸಮೀಪದ ತೊಟ್ಟಂ ಬೀಚ್ ನಲ್ಲಿ ಬುಧವಾರ ಬೆಳಿಗ್ಗೆ ನಡೆದಿದೆ.
ಬಳ್ಳಾರಿ ಕೊಟ್ಟೂರಿನ ಗೋಪಿನಾಥ್ (25) ಮತ್ತು ರಂಗನಾಥ (26) ಎಂಬ ಇಬ್ಬರು ಯುವಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಆರು ಮಂದಿಯ ಯುವಕರ ಗುಂಪು ಸಮುದ್ರಕ್ಕೆ ಬಂದಿದ್ದರು. ಇವರು ಸಮುದ್ರದಲ್ಲಿ ಈಜುತ್ತಿದ್ದಾಗ ಭಾರಿ ಅಲೆಯೊಂದು ತೀರಕ್ಕೆ ಅಪ್ಪಳಿಸಿದೆ. ಪರಿಣಾಮ ಇಬ್ಬರು ಯುವಕರು ಸಮುದ್ರದ ಪಾಲಾಗಿದ್ದಾರೆ. ಬಳಿಕ ಯುವಕರನ್ನು ಜೀವರಕ್ಷಕರು ರಕ್ಷಿಸಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.