ಡೈಲಿ ವಾರ್ತೆ: 08/ಮೇ /2024

ಬಂಡೀಪುರದಲ್ಲಿ ರೈತರಿಗೆ ಉಪಟಳ ನೀಡುತ್ತಿದ್ದ ಕಾಡಾನೆ ಸೆರೆ

ಚಾಮರಾಜನಗರ: ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗೋಪಾಲಸ್ವಾಮಿ ಬೆಟ್ಟ ವಲಯದಲ್ಲಿ ರೈತರಿಗೆ ಉಟಪಳ ಕೊಡುತ್ತಿದ್ದ ಆನೆಯನ್ನು ನಿರಂತರ ಕಾರ್ಯಾಚರಣೆ ನಡೆಸಿ ಅರಣ್ಯ ಇಲಾಖೆ ಸಿಬ್ಬಂದಿ ಬುಧವಾರ ಬೆಳಗ್ಗೆ ಸೆರೆ ಹಿಡಿದಿದ್ದಾರೆ.

ಮೂರ್ನಾಲ್ಕು ತಿಂಗಳಿನಿಂದ ಪುಂಡಾನೆ ರೈತರ ಜಮೀನುಗಳಿಗೆ ನುಗ್ಗಿ ದಾಂದಲೆ ಮಾಡುತ್ತಿತ್ತು. ಅನೇಕ ರೈತರ ಬೆಳೆಗಳನ್ನು ನಾಶ ಮಾಡಿತ್ತು. ಇದರಿಂದಾಗಿ ಬೇಸತ್ತ ರೈತರು ಆನೆ ಸೆರೆಗೆ ಅರಣ್ಯ ಇಲಾಖೆಗೆ ಒತ್ತಾಯ ಮಾಡಿದ್ದರು.
ಒಂದು ವಾರದಿಂದ ಆನೆ ಸೆರೆಗೆ ಸಾಕಾನೆಗಳ ಸಹಾಯದಿಂದ ಕಾರ್ಯಾಚರಣೆ ಮಾಡಲಾಗಿತ್ತು.