ಡೈಲಿ ವಾರ್ತೆ: 08/ಮೇ /2024
ಎಚ್.ಡಿ. ರೇವಣ್ಣ ಅವರ ನ್ಯಾಯಾಂಗ ಬಂಧನ – ಮೇ 14ರವರೆಗೆ ವಿಸ್ತರಣೆ
ಬೆಂಗಳೂರು: ಮಹಿಳೆಯನ್ನು ಅಪಹರಣಗೈದ ಪ್ರಕರಣಕ್ಕೆ ಸಂಬಂಧಿಸಿ ಜೆಡಿಎಸ್ ನಾಯಕ, ಶಾಸಕ ಎಚ್.ಡಿ.ರೇವಣ್ಣ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ಮೇ 14ರವರೆಗೆ ವಿಸ್ತರಣೆ ಮಾಡಲಾಗಿದೆ.
ರೇವಣ್ಣ ಅವರನ್ನು ಮೇ 4 ರಂದು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದರು. ಅವರ ಎಸ್ ಐಟಿ ಕಸ್ಟಡಿ ಬುಧವಾರ ಅಂತ್ಯವಾದ ಹಿನ್ನಲೆಯಲ್ಲಿ 17 ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರು ಪಡಿಸಲಾಯಿತು. ನ್ಯಾಯಾಲಯ 7 ದಿನಗಳ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಿದೆ.
ರೇವಣ್ಣ ಅವರನ್ನು ಅಧಿಕಾರಿಗಳು ಪರಪ್ಪನ ಅಗ್ರಹಾರ ಜೈಲಿಗೆ ಕರೆದೊಯ್ಯಲಿದ್ದಾರೆ ಎಂದು ತಿಳಿದು ಬಂದಿದೆ. ನಾಳೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಲ್ಲಿ ರೇವಣ್ಣ ಅವರ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ.