ಡೈಲಿ ವಾರ್ತೆ: 08/ಮೇ /2024

ಬೆಳ್ತಂಗಡಿ ಮಾಜಿ ಶಾಸಕ ಕೆ ವಸಂತ ಬಂಗೇರ ನಿಧನ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಪ್ರಭಾವಿ ರಾಜಕಾರಣಿಯಾಗಿದ್ದ, ಬೆಳ್ತಂಗಡಿ ಮಾಜಿ ಸಚಿವ, ಕೆ ವಸಂತ ಬಂಗೇರ (79) ಇಂದು ನಿಧನರಾದರು.

ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಮೇ.09 ರಂದು ಬೆಳಿಗ್ಗೆ ಬಂಗೇರ ಅವರ ಪಾರ್ಥಿವವನ್ನು ಶರೀರ ಬೆಳ್ತಂಗಡಿಗೆ ಕೊಂಡೊಯ್ಯುವ ಬಗ್ಗೆ ಮಾಹಿತಿ ಇದ್ದು, ಸಾರ್ವಜನಿಕರ ಅಂತಿಮ ದರ್ಶನದ ಬಳಿಕ ಅಂತ್ಯಕ್ರಿಯೆ ನಡೆಯಲಿದೆ.

1946 ರ ಜ.15 ರಲ್ಲಿ ಸುಬ್ಬ ಪೂಜಾರಿ-ದೇವಕಿ ದಂಪತಿಯ ಕುಟುಂಬದಲ್ಲಿ ವಸಂತ ಬಂಗೇರ ಜನಿಸಿದ್ದರು. ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ಅವರು ಬೆಳ್ತಂಗಡಿ ಕ್ಷೇತ್ರದಿಂದ 5 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು.