ಡೈಲಿ ವಾರ್ತೆ: 08/ಮೇ /2024
ಮಂಗಳೂರು: ಇಂಜಿನಿಯರಿಂಗ್ ವಿದ್ಯಾರ್ಥಿ ಹಾಸ್ಟೆಲ್‌ನಲ್ಲೇ ನೇಣು ಬಿಗಿದು ಆತ್ಮಹತ್ಯೆ
ಮಂಗಳೂರು: ದ್ವಿತೀಯ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿ ನಗರದ ಹಾಸ್ಟೆಲ್ ನಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ ನಿತೇಶ್ ರಾವ್(20) ಎಂದು ತಿಳಿದು ಬಂದಿದೆ.
ಉಡುಪಿ ಜಿಲ್ಲೆಯ ನಿವಾಸಿಯಾಗಿರುವ ನಿತೇಶ್ ರಾವ್ ಕಳೆದ 2 ವರ್ಷಗಳಿಂದ ಮಂಗಳೂರಿನ ಕಾಲೇಜಿನಲ್ಲಿ ದ್ವಿತೀಯ ವರ್ಷದ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದರು. ಇವರು ಮಂಗಳೂರಿನ ಬೀಬಿ ಅಲಾಬಿ ರಸ್ತೆಯ ಹಿಂದುಳಿದ ವರ್ಗಗಳ ಸರಕಾರಿ ಹಾಸ್ಟೆಲ್‌ನಲ್ಲಿದ್ದುಕೊಂಡು ಕಾಲೇಜು ವ್ಯಾಸಂಗ ಮಾಡುತ್ತಿದ್ದರು. ಆದರೆ ಬುಧವಾರ ಬೆಳಗ್ಗೆ 10:30ರ ಸುಮಾರಿಗೆ ಹಾಸ್ಟೆಲ್ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ನಿತೇಶ್ ರಾವ್ ತಾಯಿ ಮತ್ತು ಸಹೋದರಿಯನ್ನು ಅಗಲಿದ್ದಾರೆ. ಇವರ ತಂದೆಯೂ ಸುಮಾರು 5 ವರ್ಷಗಳ ಹಿಂದೆ ನಿಧನರಾಗಿದ್ದರು.
ಈ ಬಗ್ಗೆ ನಿತೇಶ್ ತಾಯಿ ನೀಡಿದ ದೂರಿನ ಮೇರೆಗೆ ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.