ಡೈಲಿ ವಾರ್ತೆ: 09/ಮೇ /2024

ಬಂಟ್ವಾಳ ತೌಹೀದ್ ಆಂಗ್ಲ ಮಾಧ್ಯಮ ಶಾಲೆಗೆ ಎಸ್ಸೆಸ್ಸೆಲ್ಸಿ ಯಲ್ಲಿ ಶೇಕಡಾ 100 ಫಲಿತಾಂಶ

ಬಂಟ್ವಾಳ : ಇಲ್ಲಿನ ಕೆಳಗಿನ ಪೇಟೆಯ ತೌಹೀದ್ ಆಂಗ್ಲ ಮಾಧ್ಯಮ ಶಾಲೆಯು ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇಕಡಾ 100 ಫಲಿತಾಂಶ ದಾಖಲಿಸಿದೆ.

    ಒಟ್ಟು 114 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ಈ ಪೈಕಿ 28 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 71 ಮಂದಿ ಪ್ರಥಮ ದರ್ಜೆಯಲ್ಲಿ ಹಾಗೂ 15 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.

    ಫಾತಿಮಾ ರಈಸಾ (604), ಫಾತಿಮಾ ನಿಫಾ (602), ಅಬ್ದುಲ್ ರಿಶಾನ್ (600) ಅಂಕಗಳನ್ನು ಪಡೆದು ಶಾಲೆಯಲ್ಲಿ ಕ್ರಮವಾಗಿ ಪ್ರಥಮ, ದ್ವಿತೀಯ, ತೃತೀಯ ಸ್ಥಾನ ಪಡೆದಿದ್ದಾರೆ.