ಡೈಲಿ ವಾರ್ತೆ: 09/ಮೇ /2024

ಗೋಳ್ತಮಜಲ್ ಜೆಮ್ ಆಂಗ್ಲ ಮಾಧ್ಯಮ ಶಾಲೆಗೆ ಎಸ್ಸೆಸ್ಸೆಲ್ಸಿ ಯಲ್ಲಿ ಶೇಕಡಾ 100 ಫಲಿತಾಂಶ

ಬಂಟ್ವಾಳ : ಕಲ್ಲಡ್ಕ ಸಮೀಪದ ಗೋಳ್ತಮಜಲು ಜೆಮ್ ಆಂಗ್ಲ ಮಾಧ್ಯಮ ಶಾಲೆಯು ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇಕಡಾ 100 ಫಲಿತಾಂಶ ದಾಖಲಿಸಿದೆ.

    ಒಟ್ಟು 48 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ಈ ಪೈಕಿ 13 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 26 ಮಂದಿ ಪ್ರಥಮ ದರ್ಜೆಯಲ್ಲಿ ಹಾಗೂ 9 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.

    ಸಾತ್ವಿ ಶೆಟ್ಟಿ (581), ಸನಾ ಮರಿಯಂ (573),  ಅಝ್ಮ (559) ಅಂಕಗಳನ್ನು ಪಡೆದು ಶಾಲೆಯಲ್ಲಿ ಕ್ರಮವಾಗಿ ಪ್ರಥಮ, ದ್ವಿತೀಯ, ತೃತೀಯ ಸ್ಥಾನ ಪಡೆದಿದ್ದಾರೆ.