ಡೈಲಿ ವಾರ್ತೆ: 10/ಮೇ /2024
ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ಮಂಜೂರು
ನವದೆಹಲಿ: ಹೊಸ ಮದ್ಯ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ಸಿಕ್ಕಿದೆ.
ಚುನಾವಣೆ ಹಿನ್ನೆಲೆ ಜೂನ್ 1 ರ ವರೆಗೆ ಜಾಮೀನು ಮಂಜೂರು ಮಾಡಲಾಗಿದೆ. ಏಳು ಹಂತದ 2024 ರ ಲೋಕಸಭೆ ಚುನಾವಣೆಗೆ ಅಂತಿಮ ಹಂತದ ಮತದಾನದ ವರೆಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿದೆ.
ದೆಹಲಿ ಮದ್ಯದ ಅಬಕಾರಿ ನೀತಿ ಹಗರಣದಲ್ಲಿ ಮಾರ್ಚ್ 21 ರಂದು ಜಾರಿ ನಿರ್ದೇಶನಾಲಯದಿಂದ ಆಮ್ ಆದ್ಮಿ ಪಕ್ಷದ ನಾಯಕ ಕೇಜ್ರಿವಾಲ್‌ರನ್ನು ಬಂಧಿಸಲಾಗಿತ್ತು.