ಡೈಲಿ ವಾರ್ತೆ: 11/ಮೇ /2024

ಮಡಿಕೇರಿ: ಬ್ಯಾನರ್ ಕಟ್ಟುತ್ತಿದ್ದ ವೇಳೆ ಆಕಸ್ಮಿಕ ವಿದ್ಯುತ್ ತಂತಿ ತಗುಲಿ ಯುವಕ ಮೃತ್ಯು!

ಮಡಿಕೇರಿ: ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಮೂರ್ನಾಡು ಪಟ್ಟಣದಲ್ಲಿ ಶುಕ್ರವಾರ ರಾತ್ರಿ ನಡೆದಿದೆ.

ವಿದ್ಯುತ್ ತಂತಿ ತಗಲಿ ಮೃತ ದುರ್ದೈವಿ ಮೂರ್ನಾಡಿನ ಆರಿಫ್ (34) ಎಂದು ಗುರುತಿಸಲಾಗಿದೆ.

ಮೂರ್ನಾಡಿನಲ್ಲಿ ನಡೆಯುತ್ತಿರುವ ಮುಸ್ಲಿಂ ಕಪ್ ಕ್ರಿಕೆಟ್ ಪಂದ್ಯಾವಳಿಯ ಬ್ಯಾನರ್ ಕಟ್ಟುತ್ತಿದ್ದ ಸಂದರ್ಭ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಆರಿಫ್ ಮೃತಪಟ್ಟಿದ್ದಾರೆ. ಜೊತೆಯಲ್ಲಿದ್ದ ಯುವಕರು ಅಪಾಯದಿಂದ ಪಾರಾಗಿದ್ದಾರೆ.
ಮೂರ್ನಾಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.