ಡೈಲಿ ವಾರ್ತೆ: 20/ಮೇ /2024
ಶ್ರೀಲಂಕಾ ಮೂಲದ 4 ಐಸಿಸ್ ಉಗ್ರರನ್ನು ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ಬಂಧಿಸಿದ ಗುಜರಾತ್ ಪೊಲೀಸರು
ಅಹಮದಾಬಾದ್: ಅಹಮದಾಬಾದ್‌ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶ್ರೀಲಂಕಾ ನಾಲ್ವರು ಐಸಿಸ್ ಭಯೋತ್ಪಾದಕರನ್ನು ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಬಂಧಿಸಿದೆ. ಇದೀಗ ಗುಜರಾತ್ ಎಟಿಎಸ್ ಅಧಿಕಾರಿಗಳು ತೀವ್ರ ವಿಚಾರಣೆ ನಡೆಸಲು ಉಗ್ರರನ್ನು ಅಜ್ಞಾತ ಸ್ಥಳಕ್ಕೆ ಕರೆದೊಯ್ದಿದೆ ಎಂದು ತಿಳಿದು ಬಂದಿದೆ.
ಅವರು ಅಹಮದಾಬಾದ್ ವಿಮಾನ ನಿಲ್ದಾಣಕ್ಕೆ ಯಾಕೆ ಬಂದಿದ್ದಾರೆ ಎಂಬ ಬಗ್ಗೆ ಇನ್ನು ಮಾಹಿತಿ ಸಿಕ್ಕಿಲ್ಲ. ಈ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಇದೀಗ ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದ್ದು, ಐಪಿಎಲ್ ಕ್ವಾಲಿಫೈಯರ್ ಮತ್ತು ಎಲಿಮಿನೇಟರ್ ಪಂದ್ಯಗಳಿಗಾಗಿ ಮೂರು ತಂಡಗಳು ಅಹಮದಾಬಾದ್ ವಿಮಾನ ನಿಲ್ದಾಣಕ್ಕೆ ಆಗಮಿಸುವ ಮೊದಲು ಈ ಘಟನೆ ನಡೆದಿದೆ. ಹಾಗಾಗಿ ಈಗಾಗಲೇ ಅಹಮದಾಬಾದ್ ವಿಮಾನ ನಿಲ್ದಾಣ ಹಾಗೂ ಅಕ್ಕಪಕ್ಕದ ನಗರಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ.