



ಡೈಲಿ ವಾರ್ತೆ: 24/ಮೇ /2024


ಕಳಸ: ಗಾಳಿ-ಮಳೆ ಆರ್ಭಟಕ್ಕೆ ಮನೆ ಮೇಲೆ ಬಿದ್ದ ಬೃಹತ್ ಮರ
ಚಿಕ್ಕಮಗಳೂರು: ಗಾಳಿ-ಮಳೆ ಆರ್ಭಟದಿಂದ ಮನೆ ಮೇಲೆ ಬೃಹತ್ ಮರ ಬಿದ್ದು ಮನೆ ಸಂಪೂರ್ಣ ಜಖಂಗೊಂಡಿರುವ ಘಟನೆ ಕಳಸ ತಾಲೂಕಿನಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದೆ.
ಕಳಸ ತಾಲೂಕಿನ ಬಾಳೆಹೊಳೆ ಸಮೀಪದ ಕಗ್ಗನಹಳ್ಳ ಗ್ರಾಮದಲ್ಲಿ ಸುರಿದ ಭಾರಿ ಮಳೆಯಿಂದಾಗಿ ಗಿರಿಜಾ ಎಂಬುವರ ಮನೆ ಮೇಲೆ ಬೃಹತ್ ಗಾತ್ರದ ಮರವೊಂದು ಉರುಳಿ ಬಿದ್ದ ಪರಿಣಾಮ ಮನೆ ಸಂಪೂರ್ಣ ಜಖಂಗೊಂಡಿದ್ದು ಮನೆಯಲ್ಲಿದ್ದ ವಸ್ತುಗಳೆಲ್ಲಾ ನಾಶವಾಗಿದೆ. ಅದೃಷ್ಟವಶಾತ್ ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕೂಲಿ ಮಾಡಿ ಜೀವನ ಮಾಡಿತ್ತಿದ್ದ ಗಿರಿಜಾ ಕುಟುಂಬ ಇದೀಗ ಅತಂತ್ರರಾಗಿದ್ದಾರೆ.