ಡೈಲಿ ವಾರ್ತೆ: 25/ಮೇ /2024
ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಆಟೋ ರಿಕ್ಷಾ – ಚಾಲಕ ಸ್ಥಳದಲ್ಲೇ ಮೃತ್ಯು!
ಪಣಂಬೂರು: ಚಾಲಕನ ನಿಯಂತ್ರಣ ತಪ್ಪಿ ಆಟೋ ರಿಕ್ಷಾಯೊಂದು ಚರಂಡಿಗೆ ಬಿದ್ದು ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರಿನ ಕೋಡಿಕಲ್ ನಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ.
ಮೃತಪಟ್ಟ ಆಟೋ ಚಾಲಕ ಕೊಟ್ಟಾರಚೌಕಿ ನಿವಾಸಿ ದೀಪಕ್ ಎಂದು ಗುರುತಿಸಲಾಗಿದೆ.
ರಾತ್ರಿ ಮಳೆ ಬಂದ ಕಾರಣ ತೋಡಿನಲ್ಲಿ ನೀರು ಹರಿಯುತ್ತಿತ್ತು. ಈ ವೇಳೆ ರಿಕ್ಷಾ ತೋಡಿಗೆ ಬಿದ್ದಿದೆ. ಜನರು ನೋಡಿದಾಗ ನೀರೊಳಗೆ ರಿಕ್ಷಾ ಹೆಡ್ ಲೈಟ್ ಉರಿಯುತ್ತಿದ್ದುದನ್ನು ಕಂಡು ಅಗ್ನಿಶಾಮಕಕ್ಕೆ ಕರೆ ಮಾಡಿದ್ದಾರೆ. ತೋಡಿನ ಆಳದಲ್ಲಿ ರಿಕ್ಷಾ ಪತ್ತೆಯಾಗಿದ್ದು, ಚಾಲಕ ಮೃತ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.