

ಡೈಲಿ ವಾರ್ತೆ: 31/ಮೇ /2024


ಉಡುಪಿ ಗ್ಯಾಂಗ್ ವಾರ್ ಪ್ರಕರಣ: ನಾಲ್ವರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು
ಉಡುಪಿ: ಉಡುಪಿ ಕುಂಜಿಬೆಟ್ಟುವಿನಲ್ಲಿ ನಡೆದ ಗ್ಯಾಂಗ್ ವಾರ್ ಪ್ರಕರಣದ ಆರೋಪಿಗಳನ್ನು ಉಡುಪಿಯ ಪ್ರಧಾನ ಸಿವಿಲ್ ನ್ಯಾಯಧೀಶರು ಹಾಗೂ ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳ ನ್ಯಾಯಾಲಯದಲ್ಲಿ ಶುಕ್ರವಾರ ನಗರ ಠಾಣಾ ಪೋಲಿಸರು ಹಾಜರುಪಡಿಸಿದರು.
ಪ್ರಕರಣದಲ್ಲಿ ಬಂಧಿತರಾಗಿರುವ ಆರು ಆರೋಪಿಗಳ ಪೈಕಿ ಅಲ್ಫಾಝ್, ಮಜೀದ್, ರಾಕಿಬ್, ಶರೀಫ್ ನನ್ನು ಬಾಡಿ ವಾರೆಂಟ್ ಮೂಲಕ ತನಿಖೆಗೆ ಪಡೆಯಲಾಗಿದ್ದು ತನಿಖೆ ಪೂರ್ಣಗೊಂಡ ಹಿನ್ನೆಲೆಯಲ್ಲಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ. ಆರೋಪಿಗಳ ಮಹಜರು ಪ್ರಕ್ರಿಯೆಯನ್ನು ನಡೆಸಿದ್ದು, ತನಿಖೆಯಲ್ಲಿ ಆರೋಪಿಗಳ ಕೃತ್ಯಕ್ಕೆ ಬಳಸಿದ 2 ಡ್ರ್ಯಾಗರ್ ಮತ್ತು 1 ತಲ್ವಾರ್ ಅನ್ನು ವಶಪಡಿಸಿಕೊಳ್ಳಲಾಗಿದೆ.