



ಡೈಲಿ ವಾರ್ತೆ: 04/ಜೂ./2024


ಉಡುಪಿ- ಚಿಕ್ಕಮಗಳೂರು
ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ಭರ್ಜರಿ ಗೆಲುವು

ಉಡುಪಿ: ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ಅವರು ಕಾಂಗ್ರೆಸ್ ಅಭ್ಯರ್ಥಿ ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ ವಿರುದ್ಧ ಗೆಲುವು ಸಾಧಿಸಿದ್ದು, ಮತ ಎಣಿಕೆ ಕೇಂದ್ರ ಸಮೀಪ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು.
ಮತ ಎಣಿಕೆ ಕೇಂದ್ರಕ್ಕೆ ಆಗಮಿಸಿದ ಕೋಟ ಶ್ರೀನಿವಾಸ್ ಪೂಜಾರಿ ಅವರು ಗೆಲುವಿನ ನಗೆ ಬೀರಿದರು. ಈ ಸಂದರ್ಭದಲ್ಲಿ ಕಾರ್ಯಕರ್ತರು ಅವರನ್ನು ಮೇಲಕ್ಕೆತ್ತಿ ಘೋಷಣೆಗಳನ್ನು ಕೂಗಿ ಸಂಭ್ರಮಿಸಿದರು.
ಈ ಸಂದರ್ಭ ಶಾಸಕರಾದ ಯಶ್ ಪಾಲ್ ಸುವರ್ಣ, ಕಿರಣ್ ಕುಮಾರ್ ಕೊಡ್ಗಿ, ಲಾಲಾಜಿ ಮೆಂಡನ್, ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಮೊದಲಾದವರು ಹಾಜರಿದ್ದರು.