



ಡೈಲಿ ವಾರ್ತೆ: 06/ಜೂ./2024


ಉಡುಪಿ: ಶಾಲಾ ಬಸ್ ಚಾಲನೆ ವೇಳೆ ಹೃದಯಾಘಾತಗಿದ್ದ ಚಾಲಕ ಮೃತ್ಯು
ಉಡುಪಿ: ಲಘು ಹೃದಯಾಘಾತದಿಂದ ಆಸ್ಪತ್ರೆಗೆ ಸೇರಿದ್ದ ಖಾಸಗಿ ಶಾಲಾ ಬಸ್ ಚಾಲಕ ಜೂ. 6ರ ಗುರುವಾರ ಮುಂಜಾನೆ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.
ಶಾಲಾ ಬಸ್ ಚಾಲಕ ಪೇತ್ರಿ ನಿವಾಸಿ ಆಲ್ವಿನ್ ಡಿ’ಸೋಜಾ (53) ಮೃತಪಟ್ಟವರು.
ಅವರು ಬ್ರಹ್ಮಾವರದ ಖಾಸಗಿ ಶಾಲೆಯಿಂದ ಪೆರಂಪಳ್ಳಿ ಮಾರ್ಗವಾಗಿ ಮಣಿಪಾಲದತ್ತ ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗುತ್ತಿದ್ದ ವೇಳೆ ಲಘು ಹೃದಯಾಘಾತವಾಗಿತ್ತು. ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ದುರಾದೃಷ್ಟವಶಾತ್ ಚಾಲಕ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾರೆ.