ಡೈಲಿ ವಾರ್ತೆ: 09/ಜೂ./2024

ಸಾಗರ: ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ-  ಹಲವರಿಗೆ ಗಂಭೀರ ಗಾಯ

ಶಿವಮೊಗ್ಗ: ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಸಾಗರ ತಾಲೂಕಿನ ಆನಂದಪುರ ಸಮೀಪದ ಮುಂಬಾಳುವಿನಲ್ಲಿ ನಡೆದಿದೆ.

ಸಾಗರದಿಂದ ಬೆಳ್ತಂಗಡಿಗೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿಯಾಗಿದ್ದು, 20 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯವಾಗಿದೆ.

ಧಾರಾಕಾರವಾಗಿ ಸುರಿದ ಮಳೆಯ ಕಾರಣದಿಂದ ತಿರುವಿನಲ್ಲಿ ಬಸ್‌ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಗಾಯಗೊಂಡ ಇಪ್ಪತ್ತಕ್ಕೂ ಹೆಚ್ಚು ಪ್ರಯಾಣಿಕರನ್ನು ಸಾಗರ, ಆನಂದಪುರ ಹಾಗೂ ಶಿವಮೊಗ್ಗ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.