ಡೈಲಿ ವಾರ್ತೆ: 10/ಜೂ./2024

ಉಳ್ಳಾಲ: ಕಲ್ಲಾಪು ಗ್ಲೋಬಲ್ ಮಾರುಕಟ್ಟೆ ಗೆ ಬೆಂಕಿ, ಕೋಟ್ಯಾಂತರ ರೂ. ನಷ್ಟ

ಉಳ್ಳಾಲ: ಕಲ್ಲಾಪು ಗ್ಲೋಬಲ್ ಮಾರುಕಟ್ಟೆ ಗೆ ಬೆಂಕಿ ಹಿಡಿದ ಪರಿಣಾಮ ಕೆಲವು ಅಂಗಡಿಗಳ ಸಾಮಗ್ರಿಗಳು ಬೆಂಕಿಗಾಹುತಿಯಾಗಿರುವ ಘಟನೆ ಬೆಳಕಿಗೆ ಬಂದಿದೆ.

ಬೆಂಕಿ ಅವಘಡ ಸಂಭವಿಸಿ 5 ದೊಡ್ಡ ಹಾಗೂ 20 ಸಣ್ಣ ಅಂಗಡಿಗಳು ಸಂಪೂರ್ಣ ಬೆಂಕಿಗೆ ಆಹುತಿಯಾಗಿ , ವ್ಯಾಪಾರಸ್ಥರಿಗೆ ಕೋಟ್ಯಂತರ ರೂ ನಷ್ಟ ಉಂಟಾಗಿದೆ. ಬೀಗ ಹಾಕಿದ್ದ ಅಂಗಡಿಗಳ ಒಳಗಿನಿಂದ ಬೆಂಕಿ ಕಾಣಿಸಿಕೊಂಡಿದ್ದು ಒಮ್ಮಿಂದೊಮ್ಮೆಲೇ 25 ಅಂಗಡಿಗಳಿಗೇ ವ್ಯಾಪಿಸಿದೆ. ಮಂಗಳೂರಿನಿಂದ ಅಗ್ನಿಶಾಮಕ ದಳದವರು ಸ್ಥಳಕ್ಕಾಗಮಿಸಿ ಕಾರ್ಯಾಚರಣೆ ಕೈಗೊಂಡ ಹಿನ್ನೆಲೆಯಲ್ಲಿ ದುರದೃಷ್ಟವಶಾತ್ ಉಳಿದ 60 ಅಂಗಡಿಗಳಿಗೆ ಬೆಂಕಿತಗುಲಲಿಲ್ಲ ಎಂದು ತಿಳಿದು ಬಂದಿದೆ.