ಡೈಲಿ ವಾರ್ತೆ: 10/ಜೂ./2024
ಬಂಟ್ವಾಳ : ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ಯುವಕರ ಗುಂಪು, ಪೋಲೀಸರನ್ನು ಕಂಡು ಪರಾರಿ. ಮಾರಕಾಸ್ತ್ರಗಳ ಸಹಿತ ರಿಕ್ಷಾವನ್ನು ವಶಪಡಿಸಿಕೊಂಡ ಪೊಲೀಸರು
ಬಂಟ್ವಾಳ : ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ಯುವಕರ ಗುಂಪೊಂದು ಪೊಲೀಸರನ್ನು ಕಂಡು ಪರಾರಿಯಾಗಿದ್ದು, ಮಾರಕಾಸ್ತ್ರಗಳ ಸಹಿತ ರಿಕ್ಷಾವೊಂದನ್ನು ಗ್ರಾಮಾಂತರ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ತಾಲೂಕಿನ ಬಡಗಬೆಳ್ಳೂರು ಎಂಬಲ್ಲಿ ಸಾರ್ವಜನಿಕವಾಗಿ ಮಾರಕಾಸ್ತ್ರಗಳನ್ನು ಪ್ರದರ್ಶನ ಮಾಡುತ್ತಿದ್ದ ಬಗ್ಗೆ ಸ್ಥಳೀಯರ ದೂರಿಗೆ ಬಂಟ್ವಾಳ ಗ್ರಾಮಾಂತರ ಪೋಲೀಸರು ಸ್ಥಳಕ್ಕೆ ಆಗಮಿಸಿದಾಗ ಪೋಲೀಸರನ್ನು ಕಂಡು ಆರೋಪಿಗಳು ಪರಾರಿಯಾಗಿದ್ದಾರೆ.
ಬೋಜರಾಜ, ವಿನೋದ್, ವಿವೇಕ್, ರಕ್ಷಕ್ ಎಂಬವರು ಆರೋಪಿಗಳಾಗಿದ್ದು, ಸಾರ್ವಜನಿಕರ ಸ್ಥಳದಲ್ಲಿ ತಲವಾರು ಹಿಡಿದುಕೊಂಡು ಸಾರ್ವಜನಿಕವಾಗಿ ಭಯವನ್ನುಂಟು ಮಾಡುತ್ತಿದ್ದರು ಎಂದು ಆರೋಪ ವ್ಯಕ್ತವಾಗಿದೆ.
ಸ್ಥಳದಲ್ಲಿದ್ದ ರಿಕ್ಷಾ ಹಾಗೂ ಅದರಲ್ಲಿದ್ದ ತಲವಾರನ್ನು ಪೋಲೀಸರು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.